ಟಿಕೆಟ್ ಖರೀದಿಸಿ ಮೋದಿ ಮೆಟ್ರೋ ಪ್ರಯಾಣ; ನಿಂತುಕೊಂಡೇ ವಿದ್ಯಾರ್ಥಿಗಳ ಜೊತೆಗೆ ಸಂವಾದ

Narendra modi bengaluru : ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ್ದಾರೆ. ಟಿಕೆಟ್ ಖರೀದಿಸಿ ಮೆಟ್ರೋ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮೆಟ್ರೋದಲ್ಲಿ ಪ್ರಯಾಣಿಸಿದರು ಮತ್ತು ಸಾಮಾನ್ಯ ಜನ, ಶಾಲಾ ಮಕ್ಕಳು, ಮತ್ತು ಮೆಟ್ರೋ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕರ ಜೊತೆ ಸಂವಾದ ನಡೆಸಿದರು.
ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಆರ್.ವಿ. ರಸ್ತೆ (ರಾಗಿಗುಡ್ಡ) ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಅವರು ಪ್ರಯಾಣಿಕರೊಂದಿಗೆ ನಿಂತುಕೊಂಡೇ ಮಾತುಕತೆ ನಡೆಸಿದರು.
ಮೆಟ್ರೋ ಪ್ರಯಾಣದ ಅನುಭವವನ್ನು ಹಂಚಿಕೊಂಡರು. ಮಹಿಳಾ ಲೋಕೋಪೈಲಟ್ ವಿನುತಾ ಅವರು ಪ್ರಧಾನಿ ಪ್ರಯಾಣಿಸಿದ ಮೆಟ್ರೋಗೆ ಚಾಲಕರಾಗಿದ್ದರು ಎಂಬುದು ಒಂದು ವಿಶೇಷವಾಗಿತ್ತು.
ಇದನ್ನೂ ಓದಿ : ಮೂರನೇ ಬಾರಿಗೆ ಪ್ರಧಾನಿ ಆಗಿ ದಾಖಲ ಬರೆದ ನಮೋ
ಹೊಸ ಹಳದಿ ಮಾರ್ಗ ಸುಮಾರು 19 ಕಿಲೋ ಮೀಟರ್‌ಗಿಂತಲೂ ಅಧಿಕ ಉದ್ದವಿದೆ. ಈ ಮಾರ್ಗವು ಎಲೆಕ್ಟ್ರಾನಿಕ್ ಸಿಟಿಯಂತಹ ಪ್ರಮುಖ ತಂತ್ರಜ್ಞಾನ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಇದರಿಂದಾಗಿ, ದೈನಂದಿನ ಪ್ರಯಾಣಿಕರಿಗೆ, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹೆಚ್ಚುತ್ತಿರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ
ಹಳದಿ ಮೆಟ್ರೋ ರೈಲು ಮಾರ್ಗ ಉದ್ಘಾಟಿಸಿದ ನಂತರ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ (ಅಜ್ನಿ)-ಪುಣೆ ನಡುವಿನ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ನೀಡಿದ್ರು.
ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಶಿಲಾನ್ಯಾಸ ಮಾಡಿದ್ದಾರೆ. ಸುಮಾರು 15,610 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ : 2026ಕ್ಕೆ ಭಾರತ ಪ್ರಧಾನಿ ಆಗ್ತಾರಾ ಯೋಗಿ ಆದಿತ್ಯನಾಥ್
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಸಿಲಿಕಾನ್ ಸಿಟಿಯ ಮೂಲಸೌಕರ್ಯ ವೃದ್ದಿಗೆ ಹೆಚ್ಚಿನ ಒತ್ತು ನೀಡಲಿದೆ. ಬೆಂಗಳೂರು ನಿವಾಸಿಗಳಿಗೆ ವರದಾನವಾಗಿರುವ ಮೆಟ್ರೋ ಉದ್ಘಾಟನೆ ಇನ್ನಷ್ಟು ಅನುಕೂಲವಾಗಲಿದೆ.
ಮೆಟ್ರೋ ಯೋಜನೆಯ ಜೊತೆಗೆ ವಂದೇ ಭಾರತ್ ರೈಲುಗಳ ಚಾಲನೆಯಿಂದ ನಗರ ಮತ್ತು ರಾಜ್ಯದ ಸಂಪರ್ಕ ವ್ಯವಸ್ಥೆ ಸುಧಾರಿಸಿದೆ.
ಜನಸಾಮಾನ್ಯರಂತೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಾ ಜನರ ಜೊತೆಗೆ ಬೆರೆತು ಸಂವಾದ ಮಾಡಿರೋದು ರೈಲ್ವೆ ಪ್ರಯಾಣಿಕರಿಗೆ ಖುಷಿ ಕೊಟ್ಟಿದೆ.
Narendra modi bengaluru yellow Line metro inaugurated Kannada News



