ಡಿಗ್ರಿ ಆದವರಿಗೆ ಗುಡ್ ನ್ಯೂಸ್! ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗೆ ಸೇರಿ ನಿಮ್ಮ ಕೆರಿಯರ್ ಪ್ರಾರಂಭಿಸಿ
Indian Overseas Bank Recruitment 2025: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಆಸೆ ಹೊಂದಿರುವ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಓಬಿ (IOB) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಈ ಅಧಿಸೂಚನೆಯ ಅಡಿಯಲ್ಲಿ ಐಓಬಿ ಒಟ್ಟು 750 ಅಪ್ರೆಂಟಿಸ್ ಹುದ್ದೆಗಳನ್ನು ತನ್ನ ವಿವಿಧ ಶಾಖೆಗಳಿಗಾಗಿ ಭರ್ತಿ ಮಾಡಿಕೊಳ್ಳುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳನ್ನು ಆಗಸ್ಟ್ 24 ರಂದು ನಿಗದಿಯಾಗಿರುವ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 ವಿವರ
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳು: 750
ಅರ್ಜಿ ಸಲ್ಲಿಕೆ:
ಈ ಹುದ್ದೆಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಆಗಸ್ಟ್ 10 ರಿಂದ ಪ್ರಾರಂಭವಾಗಿದ್ದು ಆಗಸ್ಟ್ 20, 2025ರವರೆಗೆ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಮಾನದಂಡಗಳು:
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಅಪ್ರೆಂಟಿಸ್ ಹುದ್ದೆಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷಗಳು. ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಮಾನದಂಡ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳು (ಪಿಡಬ್ಲ್ಯೂಬಿಡಿ): 472 ರೂ.
ಮಹಿಳಾ ಅಭ್ಯರ್ಥಿಗಳು/ಎಸ್ಟಿ ವರ್ಗ: 708 ರೂ.
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್: 944 ರೂ.
ಇದನ್ನೂ ಓದಿ: ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್! ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾದಲ್ಲಿದೆ 976 ಹುದ್ದೆಗಳು
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲು ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ.
ಅಲ್ಲಿ ಕೆರಿಯರ್ ವಿಭಾಗಕ್ಕೆ ಹೋಗಿ, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕ್ಲಿಕ್ಕಿಸಿ.
ಸೂಕ್ತ ಮಾಹಿತಿಯೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
ನಂತರ ಅರ್ಜಿ ನಮೂನೆಯನ್ನು ಸಲ್ಲಿಸಿ. ಭವಿಷ್ಯದ ಉಲ್ಲೇಖಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ನೇಮಕಾತಿ ಪ್ರಕಟಣೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದನ್ನೂ ಓದಿ: MBA ಮಾಡಿದವರಿಗೆ ವೆಲ್ತ್ ಮ್ಯಾನೇಜರ್ ಆಗುವ ಸುವರ್ಣಾವಕಾಶ: ಯೂನಿಯನ್ ಬ್ಯಾಂಕ್ನಲ್ಲಿದೆ 250 ಹುದ್ದೆಗಳು
(Indian Overseas Bank Recruitment 2025 apply online for 750 Apprentice post check the details)



