ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ! ಬ್ಯಾಂಕ್‌ ಆಫ್‌ ಮಹಾರಾಷ್ಟ್ರದಲ್ಲಿದೆ 500 ಜನರಲಿಸ್ಟ್‌ ಆಫೀಸರ್‌ ಹುದ್ದೆ

Bank Of Maharashtra Recruitment 2025: ಬ್ಯಾಂಕ್‌ನಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ಕನಸು ಕಾಣುತ್ತಿರುವ ಪದವೀಧರರಿಗೆ ಇದೊಂದು ಗುಡ್‌ ನ್ಯೂಸ್‌.

‌ಬ್ಯಾಂಕ್‌ ಆಫ್‌ ಮಹಾರಾಷ್ಟ್ರವು ಜನರಲಿಸ್ಟ್‌ ಆಫೀಸರ್‌ (ಆಫೀಸರ್‌ ಸ್ಕೇಲ್‌ 2) ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಆಗಸ್ಟ್‌ 13 ರಿಂದ ಪ್ರಾರಂಭವಾಗಿದೆ.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಫಾಮ್‌ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 30, 2025 ಎಂದು ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ನಿಗದಿಪಡಿಸಿದೆ. ಈ ನೇಮಕಾತಿಯಲ್ಲಿ ಯಾರು ಪಾಲ್ಗೊಳ್ಳಬಹುದು, ವಯೋಮಿತಿ ಎಷ್ಟು ಮುಂತಾದ ವಿಷಯಗಳನ್ನು ತಿಳಿದುಕೊಳ್ಳೋಣ.

Bank Of Maharashtra Recruitment 2025: ಹುದ್ದೆಯ ಹೆಸರು

ಜನರಲಿಸ್ಟ್‌ ಆಫೀಸರ್‌ (ಆಫೀಸರ್‌ ಸ್ಕೇಲ್‌ 2)

ಹುದ್ದೆಗಳ ಸಂಖ್ಯೆ: 500

ಅರ್ಹತೆ

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಒಬಿಸಿ, ಎಸ್ಸಿ, ಎಸ್ಟಿ ವರ್ಗದ ಅಭ್ಯರ್ಥಿಗಳು ಶೇಕಡಾ 55 ಅಂಕಗಳೊಂದಿಗೆ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಸಿಎ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ನೇಮಕಾತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಮೂರು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: ಎಂಜಿನಿಯರಿಂಗ್‌ ಪದವೀಧರರಿಗೆ ಗುಡ್‌ ನ್ಯೂಸ್‌! ಏರ್‌ಪೋರ್ಟ್ ಅಥೋರಿಟಿ ಆಫ್‌ ಇಂಡಿಯಾದಲ್ಲಿದೆ 976 ಹುದ್ದೆಗಳು

ವಯೋಮಿತಿ

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಜನರಲಿಸ್ಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳು. ನಿಯಮಾನುಸಾರ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ವಯೋಮಿತಿಯಲ್ಲ ಸಡಿಲಿಕೆಯಿರುತ್ತದೆ.

ವೇತನ

64820 – 2340/1 – 67160 – 2680/10 – 93960 ರೂ.ಗಳು

ಅರ್ಜಿ ಶುಲ್ಕ

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವುದರ ಜೊತೆಗೆ ಅರ್ಜಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಈ ನೇಮಕಾತಿಯಲ್ಲಿ ಮೀಸಲಾತಿ ರಹಿತ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳು 1180 ರೂ. ಶುಲ್ಕವನ್ನು ಹಾಗೂ ಎಸ್‌ಸಿ, ಎಸ್‌ಟಿ ವರ್ಗದವರಿಗೆ 118 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಡಿಗ್ರಿ ಆದವರಿಗೆ ಗುಡ್‌ ನ್ಯೂಸ್‌! ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್‌ ಹುದ್ದೆಗೆ ಸೇರಿ ನಿಮ್ಮ ಕೆರಿಯರ್‌ ಪ್ರಾರಂಭಿಸಿ

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಜನರಲಿಸ್ಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?‌

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಜನರಲಿಸ್ಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡಿ.

ಅಲ್ಲಿ ಕೆರಿಯರ್ಸ್‌ ವಿಭಾಗಕ್ಕೆ ಹೋಗಿ. ರಿಕ್ರೂಟ್‌ಮೆಂಟ್‌ ಪ್ರೊಸೆಸ್‌ ಮೇಲೆ ಕ್ಲಿಕ್ಕಿಸಿ. ಕರಂಟ್‌ ಓಪನಿಂಗ್ಸ್‌ ಅನ್ನು ಆಯ್ದುಕೊಳ್ಳಿ. ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆ ಪ್ರಕ್ರಿಯೆ ಪ್ರಾರಂಭಿಸಿ.

ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಭರ್ತಿ ಮಾಡಿ.

ನಿಮ್ಮ ಸಹಿ ಮತ್ತು ಫೋಟೋವನ್ನು ಅಪ್‌ಲೋಡ್‌ ಮಾಡಿ.

ನಿಗದಿತ ಶುಲ್ಕ ಪಾವತಿಸಿ, ಅರ್ಜಿ ನಮೂನೆಯನ್ನು ಸಲ್ಲಿಸಿ.

ಭವಿಷ್ಯದ ಅಗತ್ಯಕ್ಕಾಗಿ ಪ್ರಿಂಟ್‌ಔಟ್‌ ತೆಗೆದುಕೊಳ್ಳುವುದನ್ನು ಮರೆಯಬೇಡಿ.

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ಜನರಲಿಸ್ಟ್‌ ಆಫೀಸರ್‌ ಹುದ್ದೆ ಅಧಿಸೂಚನೆ ಡೌನ್‌ಲೋಡ್ ಮಾಡಿಲು ಇಲ್ಲಿ ಕ್ಲಿಕ್ಕಿಸಿ.

(Good News for degree holders Bank Of Maharashtra Recruitment 2025invites application for Generalist Officer Post)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories