ಗಣೇಶ ಚತುರ್ಥಿ : ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಬೆಂಗಳೂರು : ಗಣೇಶ ಚತುರ್ಥಿ (Ganesh Chaturthi) ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಿದ್ದತೆಗಳು ಜೋರಾಗಿದೆ. ಈ ನಡುವಲ್ಲೇ ಸರಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೊಸ ರೂಲ್ಸ್‌ ಜಾರಿಗೆ ತಂದಿದೆ.

ಕರ್ನಾಟಕ ಸರಕಾರ ಗಣೇಶ ಚತುರ್ಥಿಗಾಗಿ ಈಗಾಗಲೇ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಗಣೇಶ ಮೂರ್ತಿ ತಯಾರಿಕೆ, ವಿಸರ್ಜನೆ ಸೇರಿದಂತೆ ಎಲ್ಲಾ ವಿಚಾರಗಳನ್ನು ಮಾರ್ಗಸೂಚಿ ಒಳಗೊಂಡಿದೆ. ಅದ್ರಲ್ಲೂ ಇನ್ಮುಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಸಾರ್ವಜನಿಕವಾಗಿ ಸಂಘ, ಸಂಸ್ಥೆಗಳು ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲು ನಗರಸಭೆ, ಅಗ್ನಿಶಾಮಕ, ಪೊಲೀಸ್‌ ಇಲಾಖೆ ಹಾಗೂ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಅದ್ರಲ್ಲೂ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿತ್ಯವೂ ಉತ್ಪನ್ನವಾಗುವ ತ್ಯಾಜ್ಯವನ್ನು ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹವಾಹನಕ್ಕೆ ನೀಡುವುದು ಕಡ್ಡಾಯವಾಗಿದೆ.

ಪಿಒಪಿ ಗಣಪನಿಗೆ ಬ್ರೇಕ್‌

ಕರ್ನಾಟಕ ರಾಜ್ಯದಾದ್ಯಂತ ಮನೆ ಹಾಗೂ ಸಾರ್ವಜನಿಕವಾಗಿ ಕೂರಿಸುವ ಗಣೇಶ ಮೂರ್ತಿಯನ್ನು ಮಣ್ಣಿನಿಂದಲೇ ತಯಾರಿಸುವುದು ಕಡ್ಡಾಯವಾಗಿದೆ. ಅದ್ರಲ್ಲೂ ಪಿಒಪಿ, ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದು ಹಾಗೂ ವಿಸರ್ಜನೆ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸರಕಾರ ಎಚ್ಚರಿಕೆಯನ್ನು ನೀಡಿದೆ.

ಸಾರ್ವಜನಿಕ ಗಣೇಶೋತ್ಸವ ಆಚರಣೆಗಳಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯು ಕೆಲವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪರಿಸರ ಸ್ನೇಹಿ ಗಣೇಶೋತ್ಸವವನ್ನು ಉತ್ತೇಜಿಸುವುದು ಮತ್ತು ಜಲಮೂಲಗಳನ್ನು ರಕ್ಷಿಸುವುದು ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ : ಗಣೇಶ ಚತುರ್ಥಿಗೆ ಡಿಜೆ ನಿಷೇಧ, ಮಣ್ಣಿನ ಗಣಪನಿಗಷ್ಟೇ ಅವಕಾಶ

ಗಣೇಶ ಚತುರ್ಥಿ ಮಾರ್ಗಸೂಚಿ 2025

POP ಮೂರ್ತಿಗಳಿಗೆ ನಿಷೇಧ: ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮತ್ತು ರಾಸಾಯನಿಕ ಬಣ್ಣಗಳಿಂದ ಮಾಡಿದ ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ.

    ಪರಿಸರ ಸ್ನೇಹಿ ಮೂರ್ತಿಗಳು: ಭಕ್ತರು ನೈಸರ್ಗಿಕ ಜೇಡಿಮಣ್ಣು ಮತ್ತು ಪರಿಸರ ಸ್ನೇಹಿ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಬಳಸಬೇಕು.

    ವಿಸರ್ಜನೆಗೆ ನಿಗದಿತ ಸ್ಥಳ: ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಸರ್ಕಾರವು ನಿಗದಿಪಡಿಸಿದ ವಿಸರ್ಜನಾ ಸ್ಥಳಗಳಲ್ಲಿ ಮಾತ್ರ ವಿಸರ್ಜಿಸಬೇಕು.

    ಪರವಾನಗಿ ಕಡ್ಡಾಯ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು.

    ಇದನ್ನೂ ಓದಿ : ಧರ್ಮಸ್ಥಳದಲ್ಲಿ ಎಸ್‌ಐಟಿ ರಚಿಸಿದ್ದು ಯಾಕೆ ? ಸತ್ಯ ಬಿಚ್ಚಿಟ್ಟ ಗೃಹ ಸಚಿವ ಡಾ.ಜಿ. ಪರಮೇಶ್ವರ್‌

    ಪ್ಲಾಸ್ಟಿಕ್/ಥರ್ಮಾಕೋಲ್ ನಿಷೇಧ: ಪೆಂಡಾಲ್‌ಗಳು ಅಥವಾ ಸಾರ್ವಜನಿಕ ಗಣೇಶೋತ್ಸವ ಸ್ಥಳಗಳಲ್ಲಿ ಪ್ಲಾಸ್ಟಿಕ್, ಥರ್ಮಾಕೋಲ್ ಅಥವಾ ಫ್ಲೆಕ್ಸ್ ಬೋರ್ಡ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

    ಶಬ್ದ ಮಾಲಿನ್ಯ ನಿಯಂತ್ರಣ: ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ಇದು ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

    ತ್ಯಾಜ್ಯ ನಿರ್ವಹಣೆ: ವಿಸರ್ಜನಾ ಸ್ಥಳಗಳಲ್ಲಿ ತ್ಯಾಜ್ಯವನ್ನು (ಹೂವು, ಕಸ, ಇತ್ಯಾದಿ) ಪ್ರತ್ಯೇಕವಾಗಿ ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ವ್ಯವಸ್ಥೆಗಳನ್ನು ಮಾಡಲಾಗುವುದು.

    Ganesh Chaturthi Permission is mandatory for installation of Ganesh idols Kannada News

    Kannada News Next Desk

    Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

    Related Stories