udupi crime Report today : ಕಾರ್ಕಳದಲ್ಲಿ ಇಬ್ಬರ ಅಸಹಜ ಸಾವು, ಕಾಪುವಿನಲ್ಲಿ ವಿಷಸೇವಿಸಿ ಆತ್ಮಹತ್ಯೆ

udupi crime Report today : ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ, ಕಾಪುವಿನಲ್ಲಿ ಮೂರು ಅಸಹಜ ಸಾವಿನ ಪ್ರಕರಣಗಳು ದಾಖಲಾಗಿದೆ. ಉಡುಪಿ ತಾಲೂಕಿನಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ.

ಕಾರ್ಕಳ ಮತ್ತು ಕಾಪು ತಾಲೂಕುಗಳಲ್ಲಿ ಇತ್ತೀಚೆಗೆ ಮೂರು ಪ್ರತ್ಯೇಕ ಅಸಹಜ ಸಾವು ಪ್ರಕರಣಗಳು ವರದಿಯಾಗಿವೆ. ಪೊಲೀಸ್ ಇಲಾಖೆ ಯುಡಿಆರ್‌ (ಅಸಹಜ ಸಾವು ವರದಿ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಕಾರ್ಕಳದಲ್ಲಿ ಬಾವಿಗೆ ಬಿದ್ದು ವೃದ್ಧೆ ಸಾವು

ಕಾರ್ಕಳ ತಾಲೂಕು, ಬೆಳ್ಮಣ್‌ ಗ್ರಾಮದ ದೇವಸ್ಯ ನಿವಾಸಿಯಾಗಿರುವ 71 ವರ್ಷದ ಫ್ಲೋರಿನ್‌ ಮಥಾಯಸ್‌ ಎಂಬ ವೃದ್ಧೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಕಳೆದ 35 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಇವರು, ಆಗಸ್ಟ್ 17, 2025ರಂದು ಬೆಳಿಗ್ಗೆ ವಾಕಿಂಗ್‌ ಮಾಡುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಉಡುಪಿ, ದ.ಕ. ಉ.,ಕ ಜಿಲ್ಲೆಯಲ್ಲಿ ಭಾರೀ ಮಳೆ : ಅಗಸ್ಟ್‌ 18 ರಂದು ರೆಡ್‌ ಅಲರ್ಟ್‌ ಘೋಷಣೆ

ಜ್ವರದಿಂದ ಬಳಲುತ್ತಿದ್ದ ಮಹಿಳೆ ಸಾವು

ಕಾರ್ಕಳದ ಕಸಬಾ ಗ್ರಾಮದ ನಿವಾಸಿ ಸುನಂದ (50 ವರ್ಷ) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಆಗಸ್ಟ್ 15, 2025ರಂದು ಜ್ವರಕ್ಕೆ ಔಷಧ ತೆಗೆದುಕೊಂಡಿದ್ದ ಇವರಿಗೆ, ಆಗಸ್ಟ್ 16ರಂದು ರಾತ್ರಿ ಕಾಲು ನೋವು ಕಾಣಿಸಿಕೊಂಡಾಗ ಕುಟುಂಬಸ್ಥರು ತಕ್ಷಣ ಕಾರ್ಕಳದ ಪ್ರತಿಭಾ ನರ್ಸಿಂಗ್ ಹೋಮ್‌ಗೆ ಕರೆದೊಯ್ದರು.

ಅಲ್ಲಿಂದ ರೋಟರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ಯುವಕ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾಪು ತಾಲೂಕು, ಉಳಿಯಾರಗೋಳಿ ಗ್ರಾಮದ ಯೋಗೀಶ್ ಕರ್ಕೆರಾ ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯೋಗೀಶ್, ಕಳೆದ ಏಳೆಂಟು ತಿಂಗಳಿಂದ ಕೆಲಸವಿಲ್ಲದೆ ಮನೆಯಲ್ಲಿದ್ದರು. ಆಗಸ್ಟ್ 16, 2025ರಂದು ಸಂಜೆ ವಿಷ ಸೇವಿಸಿದ್ದು, ತಕ್ಷಣ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ಅವರ ಸಹೋದರಿ ಮಲ್ಲಿಕಾ ಉಮೇಶ್‌ ಪೂಜಾರಿ ಕಾಪು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ಗಣೇಶ ಚತುರ್ಥಿ : ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

udupi crime Report today Karkala 2 unnatural death udupi one suicide Kannada news

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories