ಉಡುಪಿ ಜಿಲ್ಲೆಯ ಶಾಲೆಗೆ ರಜೆ : ಅಗಸ್ಟ್ 19 ರಂದು ರೆಡ್ ಅಲರ್ಟ್

Udupi School Holiday : ಉಡುಪಿ : ಕಳೆದ ಮೂರು ದಿನಗಳಿಂದಲೂ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 19 ರಂದು ರೆಡ್ ಅಲರ್ಟ್ ಮುಂದುವರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ. ಸರಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಆದೇಶ ಹೊರಡಿಸಿದ್ದಾರೆ.
Also Read : ಕೋಟ : ಕೆಸ್ರು ಓಕ್ಳಿ – ಜನಮನ ಗೆದ್ದ ಕೆಸರುಗದ್ದೆ ಕ್ರೀಡಾಕೂಟ
ಇನ್ನೂ ಎರಡು ದಿನ ರೆಡ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಉಡುಪಿಯಲ್ಲಿ ಆಗಸ್ಟ್ 19 ಮತ್ತು 20 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಅತ್ಯಧಿಕ ಮಳೆ ಮತ್ತು ಬಿರುಗಾಳಿಯ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಪ್ರವಾಹ ಮತ್ತು ಇತರ ಸಮಸ್ಯೆಗಳು ಎದುರಾಗಬಹುದಾದ ಕಾರಣ ಸಾರ್ವಜನಿಕರು, ವಿಶೇಷವಾಗಿ ಕಡಲತೀರದ ಜನರು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Also Read : ಕೋಟದಲ್ಲಿ ಮಹಿಳೆಗೆ ಆನ್ಲೈನ್ ವಂಚನೆ
ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಸುರಕ್ಷತೆಗೆ ರಜೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದರೆ, ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
Heavy Rain Red Alert Udupi School Holiday August 19 Kannada News

