ಧರ್ಮಸ್ಥಳ ಪ್ರಕರಣ : ಮೌನ ಮುರಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Dharmasthala Dr. Veerendra Heggade) ಅವರು ಧರ್ಮಸ್ಥಳ ವಿರುದ್ದ ನಡೆಯುತ್ತಿರುವ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. ಧರ್ಮಸ್ಥಳದ ವಿರುದ್ದ ಆಧಾರರಹಿತ, ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳುದ್ದಾರೆ.
ಪ್ರೆಸ್ ಟ್ರೆಸ್ಟ್ ಆಫ್ ಇಂಡಿಯಾದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರೀಯೆ, ಕೊಲೆ ಮತ್ತು ಅತ್ಯಾಚಾರ ನಡೆದಿರುವ ಬಗ್ಗೆ ಇರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದ್ದಾರೆ.
ಈ ರೀತಿಯ ಸುಳ್ಳು ಪ್ರಚಾರವು ನಮ್ಮನ್ನು ತುಂಬಾ ನೋಯಿಸಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.ಈ ಎಲ್ಲಾ ಆರೋಪಗಳು ಆಧಾರರಹಿತವಾಗಿದ್ದು, ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಈಗಾಗಲೇ SIT ತನಿಖೆಗೆ ಆದೇಶಿಸಿರುವ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. “ನಮ್ಮ ವಿರುದ್ಧ ಇರುವ ಎಲ್ಲಾ ಆರೋಪಗಳ ಕುರಿತು SIT ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಈ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಹೆಗ್ಗಡೆ ಹೇಳಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಎಸ್‌ಐಟಿ ತನಿಖೆಯಲ್ಲಿ ಸಿಕ್ಕಿದ್ದೇನು : ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪೋಟಕ ಹೇಳಿಕೆ
ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ದುರುಪಯೋಗದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಯುವ ಮನಸ್ಸುಗಳನ್ನು ಹಾಳು ಮಾಡುವ ಈ ಸುಳ್ಳು ಪ್ರಚಾರವನ್ನು ತಡೆಯುವಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಸೌಜನ್ಯಾ ಪ್ರಕರಣ ಸೇರಿದಂತೆ ಹಿಂದಿನ ಎಲ್ಲಾ ತನಿಖೆಗಳಿಗೂ ತಾವು ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಸತ್ಯ ಹೊರಬರಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ಆರೋಪಗಳು ಧರ್ಮಸ್ಥಳದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೊನೆಗೂ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ
ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದರು. ಧರ್ಮಸ್ಥಳದ ವಿರುದ್ದ ಚಟುವಟಿಕೆ ನಡೆದಾಗಲೂ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಯಾವುದೇ ಹೇಳಿಕೆಯನ್ನೂ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಪ್ರಕರಣ : ಮಹೇಶ್ ತಿಮರೋಡಿ ಬಂಧನಕ್ಕೆ ಗೃಹ ಸಚಿವರ ಪರಮೇಶ್ವರ್ ಸೂಚನೆ
Dharmasthala SIT case Dharmasthala Dharmadhikari Dr Veerendra Heggade breaks silence Kannada News



