Mahesh Shetty Timarodi : ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ : ಬ್ರಹ್ಮಾವರ ಠಾಣೆಯಲ್ಲಿ ಬಿಗಿ ಭದ್ರತೆ

ಬ್ರಹ್ಮಾವರ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಅವರನ್ನು ಬ್ರಹ್ಮಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಅನ್ನೋದನ್ನು ಪೊಲೀಸ್ ಉನ್ನತ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ತಿಮರೋಡಿ ವಿಚಾರಣೆ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ಮುಂಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಿಜೆಪಿ ಮುಖಂಡ ಬಿಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಉಜಿರೆಯ ಬಳಿಯಲ್ಲಿರುವ ಮನೆಯಿಂದ ತಿಮರೋಡಿ ಅವರನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Mahesh Shetty Timarodi : ಶೋಕಾಸ್ ನೋಟಿಸ್ ನೀಡಿದ್ದ ಪೊಲೀಸರು
ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಧ್ಯಮದವರಿಗೆ ಮಾಹಿತಿಯನ್ನು ನೀಡಿದ್ದಾರೆ.
ಇದನ್ನೂ ಓದಿ : ಬ್ರಹ್ಮಾವರ ಪೊಲೀಸರ ವಶಕ್ಕೆ ಮಹೇಶ್ ಶೆಟ್ಟಿ ತಿಮರೋಡಿ
ಬ್ರಹ್ಮಾವರ ಪೊಲೀಸ್ ಠಾಣೆಯ ಮುಂದೆ ಬಿಗಿ ಭದ್ರತೆ
ಬ್ರಹ್ಮಾವರ ಪೊಲೀಸ್ ಠಾಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಿಚಾರಣೆಗೆ ಕರೆತರುವ ಹಿನ್ನೆಲೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಯ ಮುಂಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಪೊಲೀಸ್ ಠಾಣೆಗೆ ಮುಂಭಾಗದಲ್ಲಿ ಜಮಾವಣೆ ಆಗಿದ್ದ ಜನರನ್ನು ಚದುರಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ವಿಚಾರಣೆಗೆ ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.
ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್
Mahesh Shetty Timarodi arrest high alert in Brahmavar police station BL Santhosh Case



