ಯೂಟ್ಯೂಬರ್‌ ಸಮೀರ್‌ ಬಂಧನ ? ಧರ್ಮಸ್ಥಳದ ಕುರಿತು ಅಪಪ್ರಚಾರ ಆರೋಪ

ಬೆಂಗಳೂರು : ಧರ್ಮಸ್ಥಳ ಹಾಗೂ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಸಂಚಲನ ಮೂಡಿಸಿದ್ದ ಯೂಟ್ಯೂಬರ್‌ ದೂತ ಸಮೀರ್‌ ಎಂಡಿ (sameer md Dhootha arrest) ಬಂಧನವಾಗುವ ಸಾಧ್ಯತೆಯಿದೆ.

ಬೆಳ್ತಂಗಡಿ ಠಾಣೆಯಲ್ಲಿ ಸಮೀರ್‌ ಎಂಡಿ ವಿರುದ್ದ ಸುಮೋಟೋ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಠಾಣೆಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಆದರೆ ಸಮೀರ್‌ ವಿಚಾರಣೆಗೆ ಹಾಜರಾಗಿರಲಿಲ್ಲ.

ಪೊಲೀಸರ ನೋಟೀಸ್‌ ಸ್ವೀಕಾರ ಮಾಡದ ಹಿನ್ನೆಲೆಯಲ್ಲಿ ಇದೀಗ ಸಮೀರ್‌ ಎಂಡಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಬೆಳ್ತಂಗಡಿ ಠಾಣೆಯ ಪೊಲೀಸರು ಇದೀಗ ಬನ್ನೇರುಘಟ್ಟ ತಲುಪಿದ್ದು, ಬಾಡಿಗೆ ಮನೆಯಲ್ಲಿ ಸಮೀರ್‌ ಇದುವ ಮಾಹಿತಿ ಲಭ್ಯವಾಗಿದೆ.

ಬೆಳ್ತಂಗಡಿಯ ಠಾಣೆಯ ಪಿಎಸ್‌ಐ ಆನಂದ ಅವರು ಸಿಬ್ಬಂಧಿಗಳ ಜೊತೆಗೆ ಸಮೀರ್‌ ಎಂಡಿ ಮನೆಯ ಪಕ್ಕದಲ್ಲಿದ್ದು, ಯಾವುದೇ ಕ್ಷಣದಲ್ಲಿಯೂ ಕೂಡ ಆತನ ಬಂಧನವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ : ಬ್ರಹ್ಮಾವರ ಪೊಲೀಸ್‌ ಠಾಣೆಯ ಸುತ್ತ ಬಿಗಿ ಪೊಲೀಸ್‌ ಭದ್ರತೆ

ದೂತ ಯೂಟ್ಯೂಬ್‌ ಚಾನೆಲ್‌ ಮೂಲಕ ಖ್ಯಾತಿ

ಸಮೀರ್‌ ಎಂಡಿ ಎಂಬಾತ ದೂತ ಅನ್ನೋ ತನ್ನ ಯೂಟ್ಯೂಬ್‌ ಚಾನೆಲ್‌ ಮೂಲಕ ಖ್ಯಾತಿಯನ್ನು ಪಡೆದುಕೊಂಡಿದ್ದ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಮಾಡಿದ್ದಾನೆ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳಲ್ಲಿ ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ..ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಕುರಿತು ಅಪಪ್ರಚಾರ ಮಾಡಿದ್ದಾನೆ ಎಂಬ ಆರೋಪವಿದೆ.

ದೂತ ವಾಹಿನಿಯಲ್ಲಿ ಈತ ಮಾಡಿರುವ ವಿಡಿಯೋಗಳನ್ನು ಕೋಟ್ಯಾಂತರ ಮಂದಿ ವೀಕ್ಷಣೆ ಮಾಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಬ್ರಹ್ಮಾವರ ಪೊಲೀಸರ ವಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಯೂಟ್ಯೂಬ್‌ ಈತನ ವಿಡಿಯೋಗಳನ್ನು ಡಿಲೀಟ್‌ ಮಾಡಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈತ ಅನನ್ಯ ಭಟ್‌ ಹೆಸರಲ್ಲಿ ವಿಡಿಯೋವೊಂದನ್ನು ಮಾಡಿದ್ದ. ಈ ವಿಡಿಯೋ ಸಾಕಷ್ಟು ವೈರ್‌ ಆಗಿತ್ತು.

ಬೆಳ್ತಂಗಡಿ ಠಾಣೆಯ ಪೊಲೀಸರು ಈ ಕುರಿತು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ಸಮೀರ್‌ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಬಂಧನಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ : Mahesh Shetty Timarodi arrest : ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ?

sameer md Dhootha youtuber arrest dharmasthala case today

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories