ಪದವೀಧರರಿಗೆ ಬ್ಯಾಂಕ್ ಅಧಿಕಾರಿಯಾಗುವ ಸುವರ್ಣಾವಕಾಶ! 750 ಹುದ್ದೆಗಳಿಗೆ ಸೆಪ್ಟೆಂಬರ್ 4 ರ ಒಳಗೆ ಅರ್ಜಿ ಸಲ್ಲಿಸಿ
PSB Recruitment 2025: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಖಾಲಿ ಇರುವ 750 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆಯನ್ನು ಘೋಷಿಸಿದೆ.
ಅಧಿಸೂಚನೆಯ ಪ್ರಕಾರ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ 750 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕೆಂಬ ಕನಸು ಕಾಣುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಆಗಸ್ಟ್ 20 ರಿಂದ ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 4 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PSB ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ punjabandsindbank.co.in ಗೆ ಭೇಟಿ ನೀಡಿ ಫಾರ್ಮ್ ಅನ್ನು ಭರ್ತಿ ಮಾಡಬಹುದಾಗಿದೆ.
PSB Recruitment 2025 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆ ಅರ್ಹತೆ ಮತ್ತು ಮಾನದಂಡಗಳು
ಹುದ್ದೆಯ ಹೆಸರು
ಲೋಕಲ್ ಬ್ಯಾಂಕ್ ಆಫೀಸರ್
ಒಟ್ಟು ಹುದ್ದೆಗಳು
750 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಯಾವುದೇ ಸಾರ್ವಜನಿಕ ವಲಯ/ಬ್ಯಾಂಕ್/ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿ ಕೇಡರ್‌ನಲ್ಲಿ 18 ತಿಂಗಳ ಅನುಭವ ಹೊಂದಿರಬೇಕು.
ವಯೋಮಿತಿ
ಪಂಜಾಬ್ ಸಿಂಧ್ ಬ್ಯಾಂಕ್‌ನ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯಸ್ಸಿನಲ್ಲಿ ಸಡಿಲಿಕೆಯಿರುತ್ತದೆ.
ಇದನ್ನೂ ಓದಿ: ಬಿಪಿಎಸ್‌ಸಿ 539 ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆ ?
ಅರ್ಜಿ ಶುಲ್ಕ
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರಿಸಿದ ನಂತರ ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕವು ಸಾಮಾನ್ಯ, ಒಬಿಸಿ, ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ 850 ರೂ. (+ತೆರಿಗೆ+ಗೇಟ್‌ವೇ ಶುಲ್ಕಗಳು) ಹಾಗೂ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ವರ್ಗದ ಅಭ್ಯರ್ಥಿಗಳಿಗೆ 100 ರೂ. (+ತೆರಿಗೆ+ಗೇಟ್‌ವೇ ಶುಲ್ಕಗಳು).
ರಾಜ್ಯವಾರು ಖಾಲಿ ಇರುವ ಹುದ್ದೆಗಳು

ಪಂಜಾಬ್ ಸಿಂಧ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಹೀಗೆ ಅರ್ಜಿ ಸಲ್ಲಿಸಿ
– ಪಿಎಸ್‌ಬಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲ ಬಯಸುವ ಅಭ್ಯರ್ಥಿಗಳು ಮೊದಲಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
– ಮುಖ ಪುಟದಲ್ಲಿರುವ ಹೊಸ ನೋಂದಣಿ ಮೇಲೆ ಕ್ಲಿಕ್ಕಿಸಿ, ಅಲ್ಲಿ ಕೊಟ್ಟಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
– ನೋಂದಣಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭಿಸಿ. ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
– ನಂತರ ಸಹಿ ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡಿ.
– ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ನಮೂನೆಯನ್ನು ಸಲ್ಲಿಸಿ. ಭವಿಷ್ಯದ ಉಲ್ಲೇಖಗಳಿಗಾಗಿ ಅರ್ಜಿ ನಮೂನೆಯ ಮುದ್ರಣವನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
PSB Recruitment 2025 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.
ಇದನ್ನೂ ಓದಿ: LIC ಯಿಂದ 841 ವಿವಿಧ ಹುದ್ದೆಗಳ ನೇಮಕಾತಿ: ಯುವ ಪದವೀಧರರಿಗೆ ಗುಡ್ ನ್ಯೂಸ್!
(PSB invited application for local bank officer posts graduates can apply within September 4)



