ಮಾಜಿ ಸಿಎಂ ಡಿವಿ ಸದಾನಂದಗೌಡರಿಗೆ ಹ್ಯಾಕರ್ಸ್ ಕಾಟ: 3 ಲಕ್ಷ ಕನ್ನ, ಸೈಬರ್ ಕ್ರೈಂಗೆ ದೂರು

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ (dv Sadananda Gowda) ಅವರಿಗೆ ಹ್ಯಾಕರ್ಸ್‌ ಕಾಟ ಹೆಚ್ಚಾಗಿದೆ. ಯುಪಿಐ ಮೂಲಕ ಹ್ಯಾಕ್‌ ಮಾಡಿದ ಹ್ಯಾಕರ್ಸ್‌ ಸುಮಾರು 3 ಲಕ್ಷ ರೂಪಾಯಿಯನ್ನು ಕಳವು ಮಾಡಿದ್ದಾರೆ. ಈ ಕುರಿತು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಸದಾನಂದಗೌಡ ಅವರಿಗೆ ಸೇರಿದ ಎಚ್‌ಡಿಎಫ್‌ಸಿ ಬ್ಯಾಂಕ್‌ ( HDFC), ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ( SBI), ಮತ್ತು ಆಕ್ಸಿಸ್‌ ಬ್ಯಾಂಕ್‌ ( Axis) ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮೂರು ಖಾತೆಗಳಿಂದಳೂ ಹಂತಹಂತವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಖಾತೆಗೆ ಕನ್ನ ಹಾಕಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಸದಾನಂದಗೌಡ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಡಿವಿ ಸದಾನಂದ ಗೌಡ ಅವರಿಗೆ ಸೇರಿದ ಬ್ಯಾಂಕ್ ಖಾತೆಗಳಿಂದ ಸುಮಾರು ₹3 ಲಕ್ಷ ಹಣವನ್ನು ಕಳವು ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ : ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ : ಪರಿಹಾರ ಘೋಷಣೆ

ಹ್ಯಾಕರ್ಸ್‌ ಈ ಕೃತ್ಯ ಎಸಗಿದ್ದಾರೆಯೇ ಅನ್ನೋದು ಇನ್ನೂ ಖಚಿತವಾಗಿಲ್ಲ. ನಕಲಿ ಈಮೇಲ್‌, ನಕಲಿ ಕರೆ ಅಥವಾ ಮಾಲ್‌ವೇರ್‌ ಬಳಸಿ ಹಣವನ್ನು ಕದ್ದಿರಬಹುದು ಎಂದು ಶಂಕಿಸಲಾಗಿದೆ.

ಈ ಪ್ರಕರಣದ ತನಿಖೆಗಾಗಿ ಸೈಬರ್ ಕ್ರೈಂ ಪೊಲೀಸರು ಪ್ರತ್ಯೇಕ ತಂಡ ರಚಿಸುವ ಸಾಧ್ಯತೆ ಇದೆ. ಈ ರೀತಿಯ ಘಟನೆಗಳು ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ನೀಡುತ್ತಿವೆ.ಸೈಬರ್ ಭದ್ರತೆ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ವೆಬ್‌ಸೈಟ್‌ನಲ್ಲಿಯೂ ಜಾತಿ ಸಮೀಕ್ಷೆಗೆ ಅವಕಾಶ : ಸಿಎಂ ಸಿದ್ದರಾಮಯ್ಯ

ಸೈಬರ್ ಕ್ರೈಂಗೆ ದೂರು ಸಲ್ಲಿಸಿದ ನಂತರವೇ ಸಂಪೂರ್ಣ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ. ಈ ಘಟನೆಯು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳೂ ಸೈಬರ್ ದಾಳಿಗೆ ತುತ್ತಾಗಬಹುದು ಎಂಬುದನ್ನು ತೋರಿಸುತ್ತದೆ.

Cyber thieves steal Rs 3 lac from ex- CM dv Sadananda Gowda bank accounts

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories