ಕಾರ್ಕಳ : ಆನ್‌ಲೈನ್ ಬೆಟ್ಟಿಂಗ್ ದಂಧೆ, ಓರ್ವ ಅರೆಸ್ಟ್‌

karkala News (ಕಾರ್ಕಳ): ವೆಬ್‌ಸೈಟ್‌(website) ಮೂಲಕ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿ ಆಗಿದ್ದಾರೆ. ಓರ್ವನನ್ನು ಬಂಧಿಸಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ.

ನಜೀರ್‌ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಕಾರ್ಕಳ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಮತ್ತು ಅವರ ತಂಡವು ಬೆಳ್ಮಣ್ ಚರ್ಚ್ ಬಳಿಯಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಆಡುತ್ತಿರುವ ಕುರಿತು ಖಚಿತ ದಾಳಿ ನಡೆಸಿದ್ದು. ದಾಳಿಯ ವೇಳೆಯಲ್ಲಿ ನಜೀರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿತು.

ನಜೀರ್‌ನನ್ನು ವಶಕ್ಕೆ ಪಡೆದ ವಿಚಾರಣೆ ನಡೆಸಿದ ವೇಳೆಯಲ್ಲಿ ಆತನ M.yolo247.site/login ಎಂಬ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Udupi news (ಉಡುಪಿ): ಬಿಟ್‌ಕಾಯಿನ್‌ ಹೂಡಿಕೆ ₹1 ಲಕ್ಷ ರೂ. ಆನ್‌ಲೈನ್ ವಂಚನೆ

ಆರೋಪಿಯ ಬಳಿಯಿಂದ ಪೊಲೀಸರು, ಆರು ಡೆಬಿಟ್ ಕಾರ್ಡ್‌ (ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಐದು ಮತ್ತು ಕೆನರಾ ಬ್ಯಾಂಕ್‌ನ ಒಂದು), ಒಂದು ಸ್ಯಾಮ್‌ಸಂಗ್ ಮೊಬೈಲ್ ಫೋನ್ ಮತ್ತು ₹30,000 ನಗದು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕುಂದಾಪುರ : ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ

ಆರೋಪಿಯು ಇತರರ ಜೊತೆಗೆ ಸೇರಿಕೊಂಡು ವ್ಯವಸ್ಥಿತವಾಗಿ ಬೆಟ್ಟಿಂಗ್‌ ದಂಧೆ ನಡೆಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 107/2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories