12ನೇ ತರಗತಿ ಪಾಸಾದ ಪುರುಷರಿಗೆ ಗುಡ್ ನ್ಯೂಸ್‌! 737 ಕಾನ್ಸ್‌ಟೇಬಲ್‌ ಡ್ರೈವರ್‌ ಹುದ್ದೆಗೆ ಅರ್ಜಿ ಸಲ್ಲಿಸಿ

SSC Constable Recruitment 2025: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ಕಾನ್ಸ್‌ಟೇಬಲ್‌ (ಡ್ರೈವರ್‌) ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಈ ವರ್ಷ ಒಟ್ಟು 737 ಪುರುಷ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಸರ್ಕಾರಿ ಉದ್ಯೋಗದಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಅಕ್ಟೋಬರ್‌ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹತೆ ಮತ್ತು ಮಾನದಂಡಗಳು

ಹುದ್ದೆಯ ಹೆಸರು

ಕಾನ್ಸ್‌ಟೇಬಲ್‌ (ಡ್ರೈವರ್‌)

ಖಾಲಿ ಇರುವ ಒಟ್ಟು ಹುದ್ದೆಗಳು

ಒಟ್ಟು 737 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ/ಪಿಯುಸಿ ಪಾಸಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಇದನ್ನೂ ಓದಿ: ಎಂಜಿನಿಯರ್ ಪದವೀಧರರಿಗೆ ಗುಡ್ ನ್ಯೂಸ್: ಬಿಇಎಲ್‌ನಲ್ಲಿದೆ 610 ಹುದ್ದೆಗಳು

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷಗಳು ಮತ್ತು ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವೇತನ

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರೂ. ದಿಂದ 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ

SC/ST/ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದಾಗಿದೆ.
ಉಳಿದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಕೇಂದ್ರಗಳು

ಕರ್ನಾಟಕದಲ್ಲಿ ಪರೀಕ್ಷೆಯು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಉಡುಪಿ, ಮೈಸೂರು, ಶಿವಮೊಗ್ಗ ದಲ್ಲಿ ನಡೆಯುತ್ತದೆ.

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ಕಾನ್ಸ್‌ಟೇಬಲ್‌ (ಡ್ರೈವರ್‌) ನೇಮಕಾತಿ ಅಧಿಸೂಚನೆಗೆ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಕೆ ಹೇಗೆ?

  • ಮೊದಲನೆಯದಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಅಲ್ಲಿ ಅಪ್ಲೈ ಆನ್‌ಲೈನ್ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು.
  • ಅರ್ಜಿ ನಮೂನೆಯಲ್ಲಿ ಕೇಳಿರುವ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
  • ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು.
  • ನಂತರ ಅರ್ಜಿ ಶುಲ್ಕ ಪಾವತಿಸಿ, ಇನ್ನೊಮ್ಮೆ ಅರ್ಜಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು.
  • ಈಗ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ನಮೂನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಅದರ ಮುದ್ರಣವನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಅಗ್ನಿವೀರರಾಗಿ ಸೇನೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶ: 46,000 ಹುದ್ದೆಗೆ ಅರ್ಜಿ ಸಲ್ಲಿಸಿ

(SSC Constable Recruitment 2025 Apply 737 constable driver post within October 15)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories