ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಉಡುಪಿ ಜಿಲ್ಲೆಯಲ್ಲಿಂದು 282 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ.
ಉಡುಪಿ ತಾಲೂಕಿನಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 152 ಮಂದಿಗೆ ಸೋಂಕು ದೃಢವಾಗಿದ್ದು, ಕುಂದಾಪುರದಲ್ಲಿ 86 ಜನರಿಗೆ, ಕಾರ್ಕಳ ತಾಲೂಕಿನಲ್ಲಿ 43 ಜನರಿಗೆ ಇಂದು ಸೋಂಕು ದೃಢವಾಗಿದೆ. 282 ಪ್ರಕರಣಗಳ ಪೈಕಿ 77 ಮಂದಿ ಸೋಂಕಿತರಿಗೆ ಸೋಂಕಿನ ಲಕ್ಷಣಗಳಿದ್ದು, ಉಳಿದ 205 ಜನರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಅದ್ರಲ್ಲೂ 135 ಮಹಿಳೆಯರಿಗೆ ಸೋಂಕು ದೃಢವಾಗಿದ್ದು, 147 ಪುರುಷರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 44,824 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, 37,325 ಮಂದಿಯ ವರದಿ ನೆಗೆಟಿವ್ ಬಂದಿದೆ. 6201 ಜನರ ವರದಿ ಪಾಸಿಟಿವ್ ಆಗಿದ್ದು, ಇನ್ನೂ 1298 ಮಾದರಿ ಪರೀಕ್ಷಾ ವರದಿ ಬಾಕಿಯಿದೆ. ಇದುವರೆಗೆ ಜಿಲ್ಲೆಯಲ್ಲಿ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
.