Heavy Rainfall: ಅಕ್ಟೋಬರ್ 12 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ

Heavy Rainfall Alert Karnataka : ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್‌ 12ರವರೆಗೆ ಬಾರೀ ಮಳೆ ಸುರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳು ಮಧ್ಯಮದಿಂದ ಭಾರೀ ಮಳೆ, ಗುಡುಗು ಸಹಿತ ಮತ್ತು ಬಾರೀ ಗಾಳಿ ಬೀಸುವ ಸಾಧ್ಯತೆ ಇದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಉತ್ತರ ಕರ್ನಾಟಕದ ಬೆಳಗಾವಿ, ರಾಯಚೂರು, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದ್ರೆ, ರಾಯಚೂರಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ.

ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಬೀದರ್‌ ಜಿಲ್ಲೆಯ ಗುಡುಗು, ಮಿಂಚಿನ ಜೊತೆಗೆ ಗಂಟೆಗೆ 30-60 ಕಿ.ಮೀ ವೇಗದಲ್ಲಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ ಸಾಧ್ಯತೆ

ಕರಾವಳಿಯ ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಬಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಅಕ್ಟೋಬರ್‌ 12ರ ವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚದುರಿದ, ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮುಂದಿನ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಬಾರೀ ಮಳೆಯಾಗಲಿದೆ ಎನ್ನಲಾಗುತ್ತಿದೆ.

IMD Issued Heavy Rainfall Alert in Karnataka till October 12

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories