ಹಾಸನಾಂಬೆ ದರ್ಶನ : ಒಂದೇ ದಿನ 1 ಕೋಟಿ ಆದಾಯ

ಹಾಸನ: Hassanambe Temple: ವರ್ಷದಲ್ಲಿ ಒಮ್ಮೆ ಮಾತ್ರವೇ ದರ್ಶನ ನೀಡುತ್ತಿರುವ ಹಾಸನಾಂಬೆಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಇದುವರೆಗೂ ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಒಂದೇ ದಿನ 1 ಕೋಟಿಗೂ ಅಧಿಕ ಆದಾಯ ದೊರೆತಿದೆ.

ಅಕ್ಟೋಬರ್‌ 9ರಿಂದ ಹಾಸನಾಂಬಾ(Hassanamba) ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್‌ 10ರಿಂದ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಮೊದಲ ದಿನದಿಂದಲೇ ಭಕ್ತ ಸಾಗರವೇ ಹರಿದು ಬರುತ್ತಿದೆ.

ಎರಡು ದಿನಗಳಿಂದಲೂ ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ಇದುವರೆಗೂ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮಂದಿ ಹಾಸನಾಂಬೆಯ ದರ್ಶನ ಪಡೆದಿದ್ದಾರೆ.

Also Read: Hassan News : ಹಾಸನಾಂಬೆ ದರ್ಶನ, ಕರ್ತವ್ಯಲೋಪ : ಇಬ್ಬರು ವಾರ್ಡನ್ ಅಮಾನತು

ಈ ಬಾರಿ ಪ್ರತಿನಿತ್ಯ 2 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದಕ್ಕಾಗಿ ಹಾಸನ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿಯೊಬ್ಬರಿಗೂ ದೇವಿಯ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ

ಹಾಸನಾಂಬಾ ದೇವಿಯ ದರ್ಶನದ ಮೊದಲ ದಿನವೇ ಬರೋಬ್ಬರಿ 1 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಕಳೆದ ಬಾರಿ 12 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಈ ಬಾರಿ 15 ಕೋಟಿ ರೂಪಾಯಿಗೂ ಅಧಿಕ ಆದಾಯ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.

Also Read: ಬಾರೀ ಮಳೆ : ಕರಾವಳಿ ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಅಕ್ಟೋಬರ್‌ 10ರಿಂದ ಭಕ್ತರು ಹಾಸನಾಂಬೆಯ ದರ್ಶನವನ್ನು ಪಡೆಯುತ್ತಿದ್ದು, ಅಕ್ಟೋಬರ್‌ 18ರ ವರೆಗೂ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಬೆಳಗಿನಿಂದ ರಾತ್ರಿಯವರೆಗೂ ಈ ಬಾರಿ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡ ದರ್ಶನ ಪಡೆಯಲಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories