ಆರ್ ಎಸ್ ಎಸ್ ಬ್ಯಾನ್ ಮಾಡಿ : ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ ಖರ್ಗೆ ಪತ್ರ
Ban RSS: ಆರ್ಎಸ್ಎಸ್(RSS) ಸಂಘಟನೆಯು ಕೆಲವು ದಿನಗಳ ಹಿಂದಷ್ಟೆಯೇ ಶತಮಾನೋತ್ಸವ ಆಚರಿಸಿಕೊಂಡಿದೆ. ಆದರೆ ಇದೀಗ ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಹೊಸದೊಂದು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಸಂಘಟನೆಯ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಲ್ಲಿಸಲಾದ ಮನವಿ ಪತ್ರವನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಆರ್ಎಸ್ಎಸ್ ಸಂಘಟನೆಗೆ ನಿಷೇಧದ ಸಂಕಷ್ಟ ಎದುರಾಗಲಿದ್ಯಾ ಎಂಬ ಅನುಮಾನ ಮೂಡಿದೆ.
ಕೆಲ ದಿನಗಳ ಹಿಂದಷ್ಟೇ ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಿದೆ.
ಹಾಗೆಯೇ ಘೋಷಣೆಗಳನ್ನು ಕೂಗುತ್ತಾ ಯುವ ಸಮುದಾಯಗಳ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ.
Also Read: ಜಾತೀ ಸಮೀಕ್ಷೆ ಎಡವಟ್ಟು, ಸತ್ತ ಸಿಬ್ಬಂದಿಗೆ ಸಮೀಕ್ಷೆಯ ಡ್ಯೂಟಿ..!
ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ .
ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮುಖೇನ ಸಿಎಂ ಸಿದ್ದರಾಮಯ್ಯ ಬಳಿಯಲ್ಲಿ ಮನವಿ ಮಾಡಿದ್ದರು.
ಈ ಮನವಿ ಪತ್ರದ ಮೇಲೆ ಸಿಎಂ ಸಿದ್ಧರಾಮಯ್ಯ , ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಬರೆದಿದ್ದು ಆರ್ಎಸ್ಎಸ್ ಸಂಘಟನೆಗೆ ಹೊಸ ಸಂಕಷ್ಟ ಎದುರಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.
Also Read: ಹಾಸನಾಂಬೆ ದರ್ಶನ : ಒಂದೇ ದಿನ 1 ಕೋಟಿ ಆದಾಯ



