ಚಿಕ್ಕಮಗಳೂರು : ತವರು ಮನೆ ಸೇರಿದ ಪತ್ನಿ, ಹತ್ಯೆಗೈದ ಪಾಪಿ ಪತಿ

ಚಿಕ್ಕಮಗಳೂರು (chikkamagaluru News) : ಕೌಟುಂಬಿಕ ಕಲಹ ಒಂದು ಜೀವವನ್ನು ಬಲಿ ಪಡೆದ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಗಂಡನ ಮನೆಯನ್ನು ತ್ಯೆಜಿಸಿ ಪತ್ನಿ ತವರು ಮನೆ ಸೇರಿದ್ದಳು. ಪತಿಯೇ ಇದೀಗ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ. ನೇತ್ರಾ (32 ವರ್ಷ) ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ.

ನೇತ್ರಾ ಅವರು ಐದು ತಿಂಗಳ ಹಿಂದಷ್ಟೇ ಸಕಲೇಶಪುರದ ನಿವಾಸಿ ನವೀನ್ ಎಂಬುವವರೊಂದಿಗೆ ವಿವಾಹವಾಗಿದ್ದರು. ಆದರೆ, ವಿವಾಹವಾದ ಕೆಲವೇ ದಿನಗಳಲ್ಲಿ ದಂಪತಿಗಳ ನಡುವೆ ಕೌಟುಂಬಿಕ ಕಲಹ ಶುರುವಾಗಿತ್ತು.

ಕಲಹವು ತೀವ್ರ ಸ್ವರೂಪ ಪಡೆದ ಕಾರಣ, ನೇತ್ರಾ ಅವರು ಸುಮಾರು ಮೂರು ತಿಂಗಳ ಹಿಂದೆ ಪತಿಯ ಮನೆಯನ್ನು ಬಿಟ್ಟು, ಹೊಸಳ್ಳಿ ಗ್ರಾಮದಲ್ಲಿರುವ ತಮ್ಮ ತವರು ಮನೆಗೆ ಮರಳಿದ್ದರು.

ಇದನ್ನೂ ಓದಿ : ಅಂಕೋಲ : ಲಾರಿ ಪಲ್ಟಿ, ಅಡುಗೆ ಎಣ್ಣೆ ರಸ್ತೆ ಪಾಲು

ಪತ್ನಿ ತವರು ಸೇರಿದ್ದರಿಂದ ಕೋಪಗೊಂಡಿದ್ದ ಪತಿ ನವೀನ್, ಹೇಗಾದರೂ ಮಾಡಿ ಅವಳನ್ನು ಹಿಂತಿರುಗಿಸುವ ಅಥವಾ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಭಾನುವಾರ ರಾತ್ರಿ ಹೊಸಳ್ಳಿ ಗ್ರಾಮದಲ್ಲಿರುವ ನೇತ್ರಾಳ ಮನೆಗೆ ಬಂದಿದ್ದಾನೆ.

ರಾತ್ರಿ ಊಟ ಮುಗಿಸಿ ಮನೆಯ ಹೊರಗೆ ನಿಂತಿದ್ದ ನೇತ್ರಾಳನ್ನು ನವೀನ್ ಏಕಾಏಕಿ ತಡೆದು ಚಾಕುವಿನಿಂದ ಇರಿದು ತಕ್ಷಣವೇ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇತ್ರಾ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದಾರೆ.

ಇದನ್ನೂ ಓದಿ : ಗ್ಯಾರಂಟಿ ಉಚಿತ ಯೋಜನೆ : ಆರ್‌.ವಿ.ದೇಶಪಾಂಡೆ ಅಪಹಾಸ್ಯ

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಲ್ಲೂರು ಪೊಲೀಸ್ ಠಾಣೆಯ ಸಿಬ್ಬಂದಿ, ಹೆಚ್ಚಿನ ಸಮಯ ವ್ಯರ್ಥ ಮಾಡದೆ ತಮ್ಮದೇ ವಾಹನದಲ್ಲಿ ನೇತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನೇತ್ರಾ ದಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

chikkamagaluru News Husband Kills Wife in Aldur

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories