ರಾಜ್ಯದಲ್ಲಿ ‘ಐ ಲವ್ ಯೂ ಆರ್ಎಸ್ಎಸ್’ ಅಭಿಯಾನ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್ಚಿದ ಆಕ್ರೋಶ
ಮಂಡ್ಯ : I Love You RSS: ರಾಜ್ಯದಲ್ಲಿ ಆರ್ಎಸ್ಎಸ್ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಬೇಕು, ಸರ್ಕಾರಿ ಸ್ವತ್ತಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತನ್ನ ಕಾರ್ಯಚಟುವಟಿಕೆಗಳನ್ನು ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವುದು ಆರ್ಎಸ್ ಎಸ್ ಸಂಘಟನೆಯವರ ಕಣ್ಣು ಕೆಂಪಗಾಗಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಹೆಚ್ಚಿದ್ದು ಕಾಂಗ್ರೆಸ್ ಸರ್ಕಾರದ ವಿರುದ್ಧ ಐ ಲವ್ ಯೂ ಆರ್ಎಸ್ಎಸ್(RSS) ಅಭಿಯಾನವನ್ನು ಆರಂಭಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರ ನಡೆ ಖಂಡಿಸಿ ಬೀದಿಗಿಳಿದಿರುವ ಮಂಡ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಕೈಯಲ್ಲಿ ಐ ಲವ್ ಯೂ ಆರ್ಎಸ್ಎಸ್ ಪೋಸ್ಟರ್ ಹಿಡಿಯುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.
ಮಂಡ್ಯದ ಎಲ್ಲಾ ಅಂಗಡಿಗಳು, ವಾಹನಗಳ ಮೇಲೆ ಐ ಲವ್ ಯೂ ಆರ್ಎಸ್ಎಸ್ ಎಂಬ ಸ್ಟಿಕ್ಕರ್ ಅಂಟಿಸಿದ ಆರ್ಎಸ್ಎಸ್ ಸದಸ್ಯರು ಆರ್ಎಸ್ಎಸ್ ಒಂದು ದೇಶ ಭಕ್ತ ಸಂಘಟನೆ. ನಮ್ಮ ಸಂಘಟನೆ ಎಂದಿಗೂ ದೇಶ ಒಡೆಯುವ ಕಾರ್ಯ ಮಾಡಿಲ್ಲ.
Also Read: ಆರ್ಎಸ್ಎಸ್ಗೆ ಪ್ರಿಯಾಂಕ್ ಖರ್ಗೆ ಅಪ್ಪನ ಅನುಮತಿ ಬೇಕಿಲ್ಲ : ಸಿ.ಟಿ ರವಿ ಕಿಡಿ
ಬ್ಯಾನ್ ಮಾಡಲೇಬೇಕೆಂಬ ಆಸೆಯಿದ್ದರೆ ದೇಶ ವಿರೋಧಿ ಸಂಘಟನೆಗಳನ್ನು ಮಾಡಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ದ್ವೇಷವೇಕೆ ಎಂದು ಪ್ರಶ್ನಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಯುವ ಸಮುದಾಯಗಳ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುತ್ತಿದೆ.
ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ .
ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮುಖೇನ ಸಿಎಂ ಸಿದ್ದರಾಮಯ್ಯ ಬಳಿಯಲ್ಲಿ ಮನವಿ ಮಾಡಿದ್ದರು.
Also Read: CM Siddaramaiah: ಸಿಎಂ ಬದಲಾವಣೆ, ಸಚಿವರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಈ ಮನವಿ ಪತ್ರದ ಮೇಲೆ ಸಿಎಂ ಸಿದ್ಧರಾಮಯ್ಯ , ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಬರೆದಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೇಲೆ ನಿಷೇಧದ ತೂಗುಗತ್ತಿ ತೂಗುವಂತೆ ಮಾಡಿದೆ.



