ಅಪ್ರಾಪ್ತರ ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಂದೆ
Father poisons children: ತಂದೆ ಕಣ್ಣಿಗೆ ಕಾಣುವ ದೇವರು ಎಂಬ ಮಾತಿದೆ. ಈ ಮಾತು ನೂರಕ್ಕೆ ನೂರರಷ್ಟು ಸತ್ಯ ಕೂಡ. ಆದರೆ ಈ ಮಾತಿಗೆ ಅಪವಾದ ಎಂಬಂತ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದು ಹೋಗಿದೆ.
35 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಪುತ್ರರಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಆಂಧ್ರಪ್ರದೇಶದ ಡಾ.ಬಿ.ಆರ್. ಅಂಬೇಡ್ಕರ್(B.R. Ambedkar) ಕೊನಸೀಮಾ ಜಿಲ್ಲೆಯಲ್ಲಿ ಸಂಭವಿಸಿದೆ. ಮಾನಸಿಕ ಕಿರುಕುಳ ತಾಳಲಾರದೇ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.
Also Read: ಸುಪ್ರೀಂ ಕೋರ್ಟ್ ಬೆನ್ನಲ್ಲೇ, ಗುಜರಾತ್‌ನಲ್ಲಿ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ
ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಮೀನಾ ನೀಡಿರುವ ಮಾಹಿತಿ ಪ್ರಕಾರ ಪಿ. ಕಾಮರಾಜು ಎಂದು ಗುರುತಿಸಲ್ಪಟ್ಟ ವ್ಯಕ್ತಿಗೆ ಕಳೆದ ಕೆಲವು ದಿನಗಳಿಂದ ಹಲವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಆರು ವರ್ಷಗಳ ಹಿಂದೆ ಕಾಮರಾಜು ಅವರ ಪತ್ನಿ ಕೂಡ ಪತಿಯ ವಿವಾದಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ನೀಡಿರುವ ಮಾಹಿತಿಯ ಪ್ರಕಾರ ಕಾಮರಾಜು ಬೆಳಗ್ಗೆ 3 ಗಂಟೆ ಸುಮಾರಿಗೆ ನೇಣು ಬಿಗಿದುಕೊಳ್ಳುವ ಮೊದಲು ತನ್ನ ಮಕ್ಕಳಿಗೆ ವಿಷ ನೀಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ. ಕಾಮರಾಜು ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಸೂಕ್ತ ತನಿಖೆ ಬಳಿಕಷ್ಟೇ ತಿಳಿದುಬರಬೇಕಿದೆ.
Also Read: 2ರ ಮಗ್ಗಿ ಹೇಳಲು ಬಾರದ ಪುಟ್ಟ ಬಾಲಕನಿಗೆ ಮನಬಂದಂತೆ ಥಳಿಸಿದ ಶಿಕ್ಷಕಿ
ಈಗಾಗಲೇ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



