ಡಿಪ್ಲೊಮಾ, ಐಟಿಐ ಮಾಡಿದವರಿಗೆ ಗುಡ್ ನ್ಯೂಸ್! BEL ನಿಂದ 162 ಹುದ್ದೆಗಳಿಗೆ ಅರ್ಜಿ ಆಹ್ವಾನ
BEL Non Executive Recruitment 2025: ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕೆಲಸ ಮಾಡುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಎಂಜಿನಿಯರಿಂಗ್ ಸಹಾಯಕ ತರಬೇತಿ ಮತ್ತು ಟೆಕ್ನಿಷಿಯನ್ ಸಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.
ಅದು ಖಾಲಿ ಇರುವ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು BEL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 4, 2025 ಆಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
ಈ ನೇಮಕಾತಿಯಲ್ಲಿ ಒಟ್ಟು 162 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ 80 ಎಂಜಿನಿಯರಿಂಗ್ ಸಹಾಯಕ ತರಬೇತಿ ಹುದ್ದೆಗಳು ಮತ್ತು 82 ಟೆಕ್ನಿಷಿಯನ್ ಸಿ ಹುದ್ದೆಗಳು.
ವಿದ್ಯಾರ್ಹತೆ
ಎಂಜಿನಿಯರಿಂಗ್ ಸಹಾಯಕ ತರಬೇತಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 3 ವರ್ಷಗಳ ಡಿಪ್ಲೊಮಾ ಹೊಂದಿರಬೇಕು. ಟೆಕ್ನಿಷಿಯನ್ ಸಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ಐಟಿಐ ಪ್ರಮಾಣಪತ್ರ ಮತ್ತು ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ ಕೋರ್ಸ್ ಹೊಂದಿರಬೇಕು.
ವೇತನ
ಎಂಜಿನಿಯರಿಂಗ್ ಸಹಾಯಕ ತರಬೇತಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,500 ರಿಂದ 90,000 ರೂ. ಮತ್ತು ಟೆಕ್ನಿಷಿಯನ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ತಿಂಗಳಿಗೆ 21,500 ರಿಂದ 82,000 ರೂ. ವರೆಗೆ ನೀಡಲಾಗುವುದು.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು 590 ರೂ.ಗೆ ನಿಗದಿಪಡಿಸಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: Railway Department: SSLC ಮತ್ತು ITI ಪಾಸಾದವರಿಗೆ ಶುಭ ಸುದ್ದಿ : ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
(Notification out for the 162 non executive engineering and technician c posts in BEL)



