ಅನಾರೋಗ್ಯ ಪೀಡಿತ ಶಿಕ್ಷಕಿಯನ್ನು ಆಸ್ಪತ್ರೆಗೆ ಹೊತ್ತೊಯ್ದ ಯುವಕರು

ಬೈಂದೂರು (byndoor) : ಜನನಾಯಕರಿಗೆ ಜನರ ಪರ ಕಾಳಜಿ ಇಲ್ಲದೇ ಇದ್ರೆ ಜನ ಎಷ್ಟೆಲ್ಲಾ ಸಮಸ್ಯೆ ಅನುಭವಿಸ್ತಾರೆ ಅನ್ನೋದಕ್ಕೆ ಈ ಸ್ಟೋರಿ ಬೆಸ್ಟ್‌ ಎಕ್ಸಾಂಪಲ್.‌ ರಸ್ತೆ ಸಂಪರ್ಕ ಇಲ್ಲದ ಶಿಕ್ಷಕಿಯನ್ನು ಹೊತ್ತೊಯ್ದು ಯುವಕರು ಚಿಕಿತ್ಸೆ ಕೊಡಿಸಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ( maravanthe) ಗ್ರಾಮದಲ್ಲಿನ ನಿವೃತ್ತ ಅಂಗನವಾಡಿ ಶಿಕ್ಷಕಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮನೆಗೆ ರಸ್ತೆ ಸಂಪರ್ಕ ಇಲ್ಲದ ಕಾರಣಕ್ಕೆ ಆಸ್ಪತ್ರೆಗೆ ತೆರಳುವುದಕ್ಕೆ ಸಾಧ್ಯವಾಗಿಲ್ಲ.

ಕೊನೆಗೆ ಬೈಂದೂರಿನ ಸಂಗಮ ಯುವಕ ಮಂಡಲದ ಉಪಾಧ್ಯಕ್ಷರಾದ ಕಿಶನ್‌ ಪೂಜಾರಿ, ಸದಸ್ಯರಾದ ರಾಘವೇಂದ್ರ ದೇವಾಡಿಗ ಅವರು ವಯೋವೃದ್ದ ಶಿಕ್ಷಕಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

Also Read : ಬೈಂದೂರು : ಶಾಲಾ ವಾಹನಕ್ಕೆ ನಕಲಿ ವಿಮಾ ಪಾಲಿಸಿ ಪ್ರಕರಣ ದಾಖಲು

ಸಾಕಷ್ಟು ದೂರದವರೆಗೆ ಗದ್ದೆಯ ಅಂಚಿನಲ್ಲಿ ಶಿಕ್ಷಕಿಯನ್ನು ಹೊತ್ತು ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇನ್ನು ಸಂಗಮ ಯುವಕ ಮಂಡಲದ ಯುವಕರ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆಯಿಂದಲೂ ಬಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇಂದಿನ ಆಧುನಿಕ ಯುಗದಲ್ಲಿ ರಸ್ತೆ ಸಂಪರ್ಕ ಇಲ್ಲದ ಗ್ರಾಮಗಳು ತೀರಾ ವಿರಳ. ಇಂತಹ ಗ್ರಾಮದ ಜನರು ಎಷ್ಟೆಲ್ಲಾ ಸಮಸ್ಯೆ ಅನುಭವಿಸ್ತಾರೆ ಅನ್ನೋದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನ.

Also Read : ಖಾಸಗಿ ಬಸ್‌ ಚಾಲಕನ ನಿರ್ಲಕ್ಷ್ಯ, ಕ್ರೇನ್‌ ಹರಿದು ಯುವಕ ಮೃತ್ಯು

ಬೈಂದೂರು ಗ್ರಾಮದಲ್ಲಿ ರಸ್ತೆ ಸಂಪರ್ಕ ಇಲ್ಲದ ಅದೆಷ್ಟೋ ಗ್ರಾಮಗಳಿವೆ. ಮರವಂತೆಯ ಶಿಕ್ಷಕಿ ವಾಸಿಸುತ್ತಿರುವ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ಕಾರ್ಯವನ್ನು ಶಾಸಕರು ಮಾಡಬೇಕಾಗಿದೆ.

byndoor maravanthe Young man takes sick teacher to hospital

.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories