ಮಣಿಪಾಲ : ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ

ಮಣಿಪಾಲ (Manipal massage parlor) : ಮಸಾಜ್‌ ಪಾರ್ಲರ್‌ ಹೆಸರಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸೆಲೂನ್‌ ಮತ್ತು ಸ್ಪಾ ಬಾಡಿ ಮಸಾಜ್‌ ಸೆಂಟರ್‌ ಮೇಲೆ ದಾಳಿ ನಡೆಸಿದ್ದು, ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಬಾಡಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿಯ ಆಧಾರದ ಮೇಲೆ ಮಣಿಪಾಲ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ಅವರು ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ದಾಳಿಯ ವೇಳೆಯಲ್ಲಿ ಇಮ್ರಾನ್ ಮತ್ತು ಜೈಬಾಯ್ ಅಲಿಯಾಸ್ ಎಲಿಸಾ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅನಾರೋಗ್ಯ ಪೀಡಿತ ಶಿಕ್ಷಕಿಯನ್ನು ಆಸ್ಪತ್ರೆಗೆ ಹೊತ್ತೊಯ್ದ ಯುವಕರು

ಮಹೇಶ್ ಮತ್ತು ಅಶೋಕ್ ಎಂಬುವವರು ತಮ್ಮ ಸ್ವಂತ ಲಾಭಕ್ಕಾಗಿ ಇಮ್ರಾನ್‌ ಮತ್ತು ಎಲಿಸಾ ಎಂಬವರನ್ನು ಇಟ್ಟುಕೊಂಡು ಅಕ್ರಮ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ದಾಳಿಯ ವೇಳೆಯ ನೊಂದ ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲದಲ್ಲಿರುವ ಕೆಲವು ಮಸಾಜ್ ಪಾರ್ಲರ್‌ಗಳ ವಿರುದ್ಧ ಅಣೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಪೊಲೀಸರು ಈ ಹಿನ್ನೆಲೆಯಲ್ಲಿಯೂ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸ್ವತಃ ಖರ್ಚಿನಲ್ಲಿ ಅಶಕ್ತ ಕುಟುಂಬಕ್ಕೆ ಸೂರು ಕಲ್ಪಿಸಿದ ಶಾಸಕ ವಿ. ಸುನಿಲ್‌ ಕುಮಾರ್‌

Manipal Prostitution racket in the name of massage parlor Two arrested

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories