ಕರ್ನಾಟಕ ಹವಾಮಾನ ವರದಿ : ಅಕ್ಟೋಬರ್ 29ರವರೆಗೆ 7 ಜಿಲ್ಲೆಗಳಿಗೆ ಬಾರೀ ಮಳೆ ಎಚ್ಚರಿಕೆ

Karnataka Weather Report : ಬೆಂಗಳೂರು : ಕರ್ನಾಟಕದ ಹವಾಮಾನ ವರದಿಯ ಪ್ರಕಾರ, ರಾಜ್ಯದಲ್ಲಿ ಅಕ್ಟೋಬರ್ 29ರ ವರೆಗೆ 7 ಜಿಲ್ಲೆಗಳಲ್ಲಿ ಬಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯನ್ನು ರವಾನಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿರುವುದರಿಂದ ಅಕ್ಟೋಬರ್ 29 ರವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿ ಹಗುರ ಮಳೆಯಾಗುತ್ತಿದೆ. ನಾಳೆ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಶೇಕಡಾ 86 ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರುತ್ತದೆ. ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಐಎಂಡಿ ಹೇಳಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಿಗೆ, ಮುಖ್ಯವಾಗಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸುತ್ತದೆ.
ಇದನ್ನೂ ಓದಿ : ವರದಕ್ಷಿಣೆ ಕಿರುಕುಳಕ್ಕೆ ಉಪನ್ಯಾಸಕಿ ಆತ್ಮಹತ್ಯೆ ಪ್ರಕರಣ : ಮಗುವಿಗಾಗಿ ಮೈದುನನ ಜೊತೆಗೆ ಮಲಗಬೇಕೆಂದು ಅತ್ತೆ ಕಿರುಕುಳ
Karnataka Weather Report : ಕರಾವಳಿ ಕರ್ನಾಟಕದಲ್ಲಿ ಹೈ ಅಲರ್ಟ್:
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ), ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು,ಶಿವಮೊಗ್ಗ, ಹಾಸನ,ಚಾಮರಾಜನಗರ, ಬೆಂಗಳೂರು, ಮೈಸೂರು ಮತ್ತು ರಾಮನಗರಗಳಲ್ಲಿಯೂ ಮಳೆ ಮುಂದುವರಿಯಲಿದೆ.
ಇದನ್ನೂ ಓದಿ :
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಲಘು ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯೊಂದಿಗೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ತಲುಪುವ ಸಾಧ್ಯತೆಯಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ :
Karnataka Weather Report Heavy Rain Alert 7 District Oct 29



