Hassan Accident: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು : ನಾಲ್ವರಿಗೆ ಗಾಯ
ಹಾಸನ : Hassan Accident: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ(Shivamogga) ಮೂಲದ ಗೋವಿಂದ ನಾಯ್ಕ್ ಎಂಬವರ ಕುಟುಂಬ ಸದ್ಯ ಅಪಾಯದಿಂದ ಪಾರಾಗಿದೆ. ತನ್ನ ಮಗನನ್ನು ಗುರುವಾಯನಕರೆಯಲ್ಲಿ ಇರುವ ನವೋದಯ ಶಾಲೆಗೆ ಬಿಡಲು ಪತ್ನಿ ಇಬ್ಬರ ಮಕ್ಕಳ ಜೊತೆ KA-03-MS 0942 ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿಯ ಬಳಿಯಲ್ಲಿ ತಡೆಗೋಡೆ ಇಲ್ಲದ ಕಾರಣದಿಂದಾಗಿ ಕಾರು ನಿಯಂತ್ರಣ ತಪ್ಪಿ ಸುಮಾರು 80 ಅಡಿ ಆಳಕ್ಕೆ ಬಿದ್ದಿದೆ.
Also Read: Mysore Sandal Soap: ಮೈಸೂರು ಸ್ಯಾಂಡಲ್ ಸೋಪ್ ಭರ್ಜರಿ ಮಾರಾಟ : ಸರಕಾರಕ್ಕೆ 135 ಕೋಟಿ ರೂ ಡಿವಿಡೆಂಟ್
ಈ ಪ್ರಪಾತದಲ್ಲಿ ಕೆಂಪು ಹೊಳೆ ಹರಿಯುತ್ತಿದ್ದರು. ಕಾರು ಬಿದ್ದಿರುವುದನ್ನು ಕಂಡ ಸ್ಥಳೀಯರು ಹಾಗೂ ವಾಹನಗಳ ಸವಾರರು ಕೂಡಲೇ ಕಾರಿನಲ್ಲಿ ಇದ್ದವರನ್ನು ರಕ್ಷಣೆ ಮಾಡಿದ್ದಾರೆ.
ಸದ್ಯ ಗೋವಿಂದ ನಾಯ್ಕ್ ಅವರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ತಡೆಗೋಡೆ ಇಲ್ಲದ ಕಾರಣಕ್ಕೆ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



