Mysore Sandal Soap: ಮೈಸೂರು ಸ್ಯಾಂಡಲ್‌ ಸೋಪ್‌ ಭರ್ಜರಿ ಮಾರಾಟ : ಸರಕಾರಕ್ಕೆ 135 ಕೋಟಿ ರೂ ಡಿವಿಡೆಂಟ್‌

ಬೆಂಗಳೂರು: Mysore Sandal Soap : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಆಗಿರುವ ಮೈಸೂರು ಸ್ಯಾಂಡಲ್‌ ಸೋಪ್‌ ಈ ವರ್ಷ ಅತ್ಯಧಿಕ ಮಾರಾಟವನ್ನು ಕಂಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್‌ ಬರೋಬ್ಬರಿ 135 ಕೋಟಿ ರೂಪಾಯಿ ಡಿವಿಡೆಂಟ್‌ನ್ನು ಸರಕಾರಕ್ಕೆ ಹಸ್ತಾಂತರಿಸಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಪ್ರಸ್ತುತ 2024-25ರ ಸಾಲಿನಲ್ಲಿ ಅಧಿಕ ಲಾಭಗಳಿಸಿದೆ.. ಈ ಪೈಕಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದೆ.

ಮೈಸೂರು ಸ್ಯಾಂಡಲ್‌ ಸೋಪ್‌ ತಯಾರಿಕಾ ಸಂಸ್ಥೆಯ ಪರವಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡ ಅವರು ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

ಕೆಎಸ್‌ಡಿಎಲ್ ಕಳೆದ ಹಣಕಾಸು ವರ್ಷದಲ್ಲಿ ಬರೋಬ್ಬರಿ 1,700 ಕೋಟಿ ರೂಪಾಯಿ ವಹಿವಾಟು ನಡೆದಿದೆ. ಇದರಲ್ಲಿ ಬರೋಬ್ಬರಿ 451 ಕೋಟಿ ರೂ.ಲಾಭಗಳಿಸಿತ್ತು. ಲಾಭಾಂಶದ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ನೀಡಲಾಗಿದೆ.

Also Read: ರಾಜ್ಯದಲ್ಲಿ 13 ಕಂಪನಿಗಳಿಂದ ₹27 ಸಾವಿರ ಕೋಟಿ ಹೂಡಿಕೆಗೆ ಅಸ್ತು: ಎಂ ಬಿ ಪಾಟೀಲ

ಕೆಎಸ್‌ಡಿಎಲ್‌ನ ಒಟ್ಟು ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ. 2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು.

2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Also Read: ಸತೀಶ್ ಗೆ ಉತ್ತರಾಧಿಕಾರಿ ಪಟ್ಟ : ಸಿಎಂ ಆಪ್ತರನ್ನು ಕೆರಳಿಸಿದ ಯತೀಂದ್ರ ಹೇಳಿಕೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories