ಶಾಲಾ ಸಮವಸ್ತ್ರದಲ್ಲೇ ಸಾರಾಯಿ ಅಂಗಡಿಗೆ ತೆರಳಿ ಮದ್ಯ ಖರೀದಿಸಿದ ವಿದ್ಯಾರ್ಥಿನಿಯರು..!

madhya pradesh Liquor Shop School Girl : ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿನಿಯರು ಸಾರಾಯಿ ಅಂಗಡಿಗೆ ತೆರಳಿಗೆ ಮದ್ಯ ಖರೀದಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯ ನೈನ್​ಪುರದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾನೂನು ಜಾರಿ ವಿಚಾರದಲ್ಲಿ ಸರ್ಕಾರ ಎಡವಿದೆಯೇ ..? ಸಾಮಾಜಿಕ ಜಾಗೃತಿಯ ಅರಿವು ವಿದ್ಯಾರ್ಥಿನಿಯರಿಗೆ ಇಲ್ಲವೇ ? ಪೊಲೀಸ್ ವ್ಯವಸ್ಥೆ ಏನು ಮಾಡುತ್ತಿದೆ ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಹರಿದಾಡುತ್ತಿದ್ದು, ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿಯರ ಗುಂಪು ತಲೆಗೆ ಶಾಲು ಧರಿಸಿ ಮದ್ಯದ ಅಂಗಡಿಯ ಒಳಗೆ ಪ್ರವೇಶಿಸಿದೆ.

ದ್ಯದಂಗಡಿಯ ಕೌಂಟರ್​ಗೆ ತೆರಳಿದ ವಿದ್ಯಾರ್ಥಿನಿಯರು ಮದ್ಯ ಖರೀದಿಸಿ ಅಲ್ಲಿಂದ ತೆರಳಿದ್ದಾರೆ. ಮದ್ಯದಂಗಡಿಯ ಮಾಲೀಕ ವಿದ್ಯಾರ್ಥಿನಿಯರಿಗೆ ಬುದ್ಧಿಮಾತು ಹೇಳಿ ಕಳಿಸುವ ಬದಲು ಮದ್ಯವನ್ನೇ ನೀಡಿರುವುದು ವಿರೋಧಕ್ಕೆ ಕಾರಣವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಕೆಲವೇ ಗಂಟೆಗಳಲ್ಲಿ , ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಅಶುತೋಷ್ ಠಾಕೂರ್, ತಹಶೀಲ್ದಾರ್ ಮತ್ತು ಸ್ಥಳೀಯ ಪೊಲೀಸರೊಂದಿಗೆ ತಕ್ಷಣವೇ ಅಂಗಡಿಗೆ ಧಾವಿಸಿ ತನಿಖೆ ಆರಂಭಿಸಿದರು. ಸಿಸಿ ಟಿವಿ ದೃಶ್ಯಾವಳಿಗಳನ್ನು ಪಡೆದು ಪರಿಶೀಲನೆ ನಡೆಸಿದರು.

ಪ್ರಾಥಮಿಕ ತನಿಖೆಯಲ್ಲಿ ಅಪ್ರಾಪ್ತ ಬಾಲಕಿಯರಿಗೆ ಮದ್ಯ ಮಾರಾಟ ಮಾಡಿರುವುದು ದೃಢಪಟ್ಟಿದೆ. ಇದು ಕಾನೂನಿಗೆ ವಿರುದ್ಧವಾಗಿದ್ದು ಮದ್ಯ ಮಾರಾಟ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Also Read : ಜಾತ್ರೆ ಮುಗಿಸಿ ಬರುತ್ತಿದ್ದ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾ*ಚಾರ : ಆರೋಪಿಗಳ ಬಂಧನ

ಅಲ್ಲದೇ ಪೊಲೀಸ್​ ಅಧಿಕಾರಿ ಆಶುತೋಷ್​ ಠಾಕೂರ್​ ಕೂಡಲೇ ಈ ಸಂಬಂಧ ವಿವರವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಬಕಾರಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಂಗಡಿ ಮಾಲೀಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹುಡುಗಿಯರು ಅವರಾಗಿಯೇ ಮದ್ಯದಂಗಡಿಗೆ ಬಂದಿದ್ದಾರೆಯೇ..? ಅಥವಾ ಯಾರಾದರೂ ಅವರನ್ನು ಇಲ್ಲಿಗೆ ಕಳಿಸಿಕೊಟ್ಟಿದ್ದಾರಾ ಎಂಬೆಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತನಿಖೆಯ ವೇಳೆ ವಿದ್ಯಾರ್ಥಿನಿಯರು ಮದ್ಯ ಖರೀದಿ ಮಾಡಿರುವುದು ನಿಜ ಎಂದು ತಿಳಿದುಬಮದಿದೆ. ಶೀಘ್ರದಲ್ಲೇ ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ವರದಿ ನೀಡಲಿದ್ದೇವೆ. ಮದ್ಯದಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ಹಾಗೂ ದಂಡವನ್ನೂ ವಿಧಿಸಲಾಗುವುದು.

ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮಾಡಿದ ವ್ಯಕ್ತಿಯನ್ನು ವಜಾಗೊಳಿಸಲಾಗುವುದು. ಅಪ್ರಾಪ್ತ ವಯಸ್ಕರಿಗೆ ಮದ್ಯಮಾರಾಟ ಮಾಡುವುದು ಪರವಾನಿಗೆ ಷರತ್ತುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಅಬಕಾರಿ ಅಧಿಕಾರಿ ರಾಮ್​ಜಿ ಪಾಂಡೆ ಹೇಳಿದ್ದಾರೆ.

Also Read : ಪುತ್ರಿಯ ಮೇಲೆ ಅತ್ಯಾ*ಚಾರ ನಡೆಯುತ್ತಿರುವುದನ್ನು ಕಣ್ಣಾರೆ ಕಂಡ ತಂದೆ ಮಾಡಿದ್ದೇನು ನೋಡಿ

ಇನ್ನು ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಂಗಡಿ ಮಾಲೀಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಹಾಗೂ . ಅಪ್ರಾಪ್ತ ವಯಸ್ಕರಿಗೆ ಇಷ್ಟೊಂದು ಬಹಿರಂಗವಾಗಿ ಮದ್ಯ ಖರೀದಿಸಲು ಹೇಗೆ ಅವಕಾಶ ನೀಡಲಾಗಿದೆ ಎಂಬುದರ ಬಗ್ಗೆತಯೂ ತನಿಖೆ ನಡೆಸಬೇಕು ಎಂದು ಅಗ್ರಹಿಸಿದ್ದಾರೆ.

madhya pradesh Liquor Shop School Girl School Uniform

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories