ಗೃಹಲಕ್ಷ್ಮೀ ಬ್ಯಾಂಕ್ : ಫಲಾನುಭವಿಗಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಸಾಲ

Gruhalakshmi Bank : ಬೆಂಗಳೂರು : ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಇನ್ಮುಂದೆ 3 ಲಕ್ಷ ರೂಪಾಯಿ ಸಾಲ ದೊರೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆ್ಬ್ಬಾಳ್ಕರ್ ಗೃಹಲಕ್ಷ್ಮೀ ಬ್ಯಾಂಕ್ ತೆರೆಯುವುದಾಗಿ ಘೋಷಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರನ್ನು ಸ್ವಾವಲಂಬಿ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ.
ಸಾಕಷ್ಟು ಮಹಿಳೆಯರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ, ಇದೇ ಕಾರಣದಿಂದಲೇ ಬ್ಯಾಂಕ್ ತೆರೆಯಲು ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ. ಸಹಕಾರ ಸಂಘಗಳ ಮಾದರಿಯಲ್ಲಿಯೇ ಈ ಬ್ಯಾಂಕ್ ಕಾರ್ಯನಿರ್ವಹಿಸಲಿದೆ.
ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸುಮಾರು 3ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸು ಚಿಂತನೆಯನ್ನು ಹೊಂದಲಾಗಿದೆ. ಮಹಿಳೆಯರು ಸ್ವ ಉದ್ಯೋಗ ಕೈಗೊಳ್ಳುವ ಜೊತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ : ಆಶಾ ಕಾರ್ಯಕರ್ತೆಯರಿಗೆ ಸಿಗುವ ಮಾಸಿಕ ಆದಾಯ ಎಷ್ಟು ?
ಆರಂಭಿಕವಾಗಿ ನಾಲ್ಕೈದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಗೃಹಲಕ್ಷ್ಮೀ ಬ್ಯಾಂಕ್ ಕಾರ್ಯನಿರ್ವಹಿಸಲಿದೆ. ಮುಂದಿನ ಮೂರು ತಿಂಗಳುಳಲ್ಲಿ ಹಂತ ಹಂತವಾಗಿ ಎಲ್ಲಾ ಜಿಲ್ಲಾ ಮಟ್ಟಕ್ಕೂ ವಿಸ್ತಾರ ಮಾಡಲಾಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿಯನ್ನು ನೇರ ವರ್ಗಾವಣೆಯ ಮೂಲಕ ಪಾವತಿ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ಬಂದ ನಂತರ ಗೃಹಲಕ್ಷ್ಮೀ ಯೋಜನೆ ಆರಂಭಿಸಲಾಗಿದೆ.
ಬ್ಯಾಂಕು, ಅಂಚೆ ಕಚೇರಿಯಲ್ಲಿನ ಮಹಿಳೆಯ ಖಾತೆಗೆ ನೇರ ವರ್ಗಾವಣೆ ಆಗ್ತಿದ್ದ ಗೃಹಲಕ್ಷ್ಮೀ ಹಣ ಇನ್ಮುಂದೆ ಗೃಹಲಕ್ಷ್ಮೀ ಬ್ಯಾಂಕುಗಳ ಮೂಲಕ ವರ್ಗಾಯಿಸುವುದಕ್ಕೆ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಇದನ್ನೂ ಓದಿ : ರೈತರಿಗೆ ನೆರವು ನೀಡುವ ಸರಕಾರದ ಯೋಜನೆಗಳಿವು
Gruhalakshmi Bank Beneficiaries will get a loan of Rs 3 lakh



