ಶ್ವಾನಪ್ರಿಯರೇ ಗಮನಿಸಿ… ನಾಯಿಗಳಿಗೆ ಆಹಾರ ಹಾಕೋಕೆ ಬೇಕು ಲೈಸೆನ್ಸ್

ಉಡುಪಿ: ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಉಡುಪಿ ನಗರಸಭೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಶ್ವಾನಗಳಿಗೆ ಆಹಾರ ನೀಡುವ ಶ್ವಾನಪ್ರಿಯರಿಗೆಂದೇ ಕೆಲ ನಿಯಮಗಳನ್ನು ರೂಪಿಸಿದೆ. ಈ ನಿಯಮದ ಅನ್ವಯ ಬೀದಿ ನಾಯಿಗಳಿಗೆ ಕಂಡ ಕಂಡಲ್ಲಿ ಆಹಾರ ಹಾಕುವುದನ್ನು ನಿರ್ಬಂಧಿಸಲಾಗಿದೆ.

ಬೀಡಿನ ಗುಡ್ಡೆ ಹಿಂದೂ ರುದ್ರಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿ ಹಿಂದೂ ರುದ್ರಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕದ ಎದುರುಗಡೆ, ಪೆರಂಪಳ್ಳಿ ಮುಖ್ಯ ರಸ್ತೆಯ ಭಾರತೀಯ ವಿಕಾಸ ಟ್ರಸ್ಟ್ ಕೆಳಗಡೆ, ರಾಜ್ ಫಿಶ್ ಮಿಲ್ ಹತ್ತಿರ, ಆದಿ ಉಡುಪಿ ಮಲ್ಪೆ ರಸ್ತೆಯ ಹೆಲಿಪ್ಯಾಡ್ ಹತ್ತಿರ, ಕಕ್ಕುಂಜೆ ನಾರಾಯಣ ನಗರ ಹೋಗುವ ರಸ್ತೆಯ ತಿರುವು ಬಳಿ ಹಾಗೂ ಬೈಲೂರು ಹನುಮಾನ್ ಗ್ಯಾರೇಜ್ ಡಯಾನ ರಸ್ತೆ ವಿಜಯ ವೀರ ಸಂಘದ ಹತ್ತಿರ ನಿಯಮಾನುಸಾರ ಷರತ್ತು ವಿಧಿಸಿ, ಬೀದಿ ನಾಯಿಗಳಿಗೆ ಆಹಾರ ನೀಡಲು ಸ್ಥಳ ಗುರುತಿಸಲಾಗಿದೆ.

ಬೇರೆ ಯಾವುದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಲು ಸಾರ್ವಜನಿಕರು ಇಚ್ಛಿಸಿದಲ್ಲಿ ನಗರಸಭೆಗೆ ಮನವಿ ನೀಡಬೇಕು. ಮತ್ತು ನಗರಸಭೆಯಿಂದ ಗುರುತಿನ ಚೀಟಿ ಪಡೆಯುವುದು ಕಡ್ಡಾಯವಾಗಿದೆ.

ಮಾತ್ರವಲ್ಲದೇ ಯಾರು ನಾಯಿಗಳಿಗೆ ಅಹಾರ ಹಾಕುತ್ತಾರೋ ಅವರೇ ಆ ನಾಯಿಗಳಿಗೆ ರೇಬಿಸ್ ಲಸಿಕೆ ಮತ್ತು ಸಂತಾನಹರಣ ಚಿಕಿತ್ಸೆ ಮಾಡಿಸಬೇಕು ಎಂದು ಉಡುಪಿ ನಗರಸಭೆ ಹೇಳಿದೆ.

ಇದು ಮಾತ್ರವಲ್ಲ ನಾಯಿ ಮರಿಗಳನ್ನು ತಂದುಬಿಡುವವರ ವಿರುದ್ಧವೂ ಕ್ರಮಕ್ಕೆ ಮುಂದಾಗಿರುವ ನಗರಸಭೆ, ಯಾರು ಶ್ವಾನದ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಡುತ್ತಾರೋ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ.

ಇದನ್ನೂ ಓದಿ: ಉಡುಪಿ : ಫೇಸ್‌ಬುಕ್ ಜಾಹೀರಾತು ನಂಬಿ 3 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories