ವಂದೇ ಮಾತರಂ 150ನೇ ವಾರ್ಷಿಕೋತ್ಸವ : ಬಿಜೆಪಿಯಿಂದ ಸಾಮೂಹಿಕ ಗಾಯನ

Vande Mataram 150th Anniversary : ಬೆಂಗಳೂರು : ವಂದೇ ಮಾತರಂ 150ನೇ ವಾರ್ಷಿಕೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ವತಿಯಿಂದ ಸಾಮೂಹಿಕ ಗಾಯನ ಕಾರ್ಯಕ್ರಮವು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು.

Vande Mataram 150th Anniversary Mass Singing by BJP

ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಪಾಲ್ಗೊಂಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ್,‌ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ರಾಜ್ಯ ಉಪಾಧ್ಯಕ್ಷರು ಹಾಗೂ ವಂದೇ ಮಾತರಂ 150 ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕರಾದ ಮಾಳವಿಕಾ ಅವಿನಾಶ್, ಸಂಸದರಾದ ಪಿ. ಸಿ. ಮೋಹನ್‌, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್‌ ಗೌಡ.

ಶರಣು ತಳ್ಳೀಕೇರಿ, ತಮ್ಮೇಶ್‌ ಗೌಡ, ವಿನಯ್ ಬಿದರೆ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಕೇಶವ್‌ ಪ್ರಸಾದ್‌, ಭಾರತಿ ಶೆಟ್ಟಿ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಪ್ರಶಾಂತ್‌ ಮಾಕನೂರು, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Vande Mataram 150th Anniversary : Mass Singing by BJP

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories