ಬೆಂಗಳೂರು – ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಗೆ ಕೇಂದ್ರ ಒಪ್ಪಿಗೆ
ಮಂಗಳೂರು – ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಕರಾವಳಿ ಭಾಗದ ಜನತೆಯ ಬಹುದಿನಗಳ ಕನಸು. ಈ ಸಂಬಂಧ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚನೆಗೆ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಲ್ಲಿಸಿದ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ.
ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೆ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಚೌಟ ಅವರ ಮನವಿಗೆ ಪ್ರತಿಕ್ರಯಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದಕ್ಕಾಗಿ ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಲಿದೆ ಎಂದು ಹೇಳಿದೆ.
ಕೇಂದ್ರ ಸರ್ಕಾರದ ವತಿಯಿಂದ ರಚನೆಯಾಗಿರುವ ಈ ತಜ್ಞರ ಸಮಿತಿಯು ಶಿರಾಡಿಘಾಟ್ ಪ್ರದೇಶದಲ್ಲಿ ಸುರಂಗ ಮತ್ತು ರೈಲು ಸಂಚಾರದ ಕುರಿತಂತೆ ಮತ್ತು ರೈಲ್ವೆ ಮಾರ್ಗ ಅಭಿವೃದ್ಧಿಗೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಸಮಗ್ರ ಅಧ್ಯಯನ ನಡೆಸಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Nuclear Attack : ಪಾಕ್ ಮೇಲೆ ನ್ಯೂಕ್ಲಿಯರ್ ಅಟ್ಯಾಕ್ ಮಾಡಲು ಭಾರತದ ಪ್ಲಾನ್!
ಕೇಂದ್ರದ ಸ್ಪಂದನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ದಕ್ಷಿಣ ಕನ್ನಡ ಜನತೆಯ ಬಹುದಿನಗಳ ಕನಸು.
ಹೀಗಾಗಿ ಈ ಸಂಬಂಧ ಅಧ್ಯಯನ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆ ನಡೆಸಬೇಕು ಮತ್ತು ಡಿಪಿಆರ್ ಮೇಲ್ವಿಚಾರಣೆಗೆ ತಜ್ಞರ ಸಮಿತಿ ರಚನೆಯಾಗಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ.
ಈ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಸರ್ಕಾರ ಸಮಿತಿ ರಚನೆಗೆ ಒಪ್ಪಿಗೆ ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟ್ನಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಬೇಕಿದೆ.
ಈ ಹಿನ್ನೆಲೆಯಲ್ಲಿ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರು.
ಈ ಮನವಿಗೆ ಇದೀಗ ಕೇಂದ್ರ ಸರ್ಕಾರ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು ಜಂಟಿ ಕಾರ್ಯಕಾರಿ ಸಮಿತಿ ರಚನೆ ಮಾಡಿದೆ.
ಇದನ್ನೂ ಓದಿ: ಕೇರಳ ರಾಜ್ಯ ಕಡುಬಡತನದಿಂದ ಮುಕ್ತ : ಸಿಎಂ ಪಿಣರಾಯಿ ವಿಜಯನ್ ಘೋಷಣೆ



