ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಕಾಂಗ್ರೆಸ್​ ಸರ್ಕಾರ ಮಹತ್ವದ ನಿರ್ಧಾರ

School Teacher Recruitment: ಶಿಕ್ಷಕ ಹುದ್ದೆಯನ್ನು ಪಡೆದುಕೊಳ್ಳಲು ತಯಾರಿ ನಡೆಸುತ್ತಿರುವ ರಾಜ್ಯದ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್​ ಸ್ಕೂಲ್​ ಆರಂಭಗೊಳ್ಳಲಿದ್ದು ಇದಕ್ಕಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದೇವೆ ಎಂದು ಮಡಿಕೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಸೋಮವಾರಪೇಟೆ ತಾಲೂಕಿನ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ, ರಾಜ್ಯದಲ್ಲಿ ಪ್ರಸ್ತುತ ಎಲ್‌ಕೆಜಿಯಿಂದ ಪಿಯುಸಿಯವರೆಗೆ 1.16 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಕಲ ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವತಿಯಿಂದ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್​ ಸೌಲಭ್ಯ ಒದಗಿಸಲಾಗಿದೆ. ಸಂಜೆ ಸಮಯದಲ್ಲಿ ಹೆಚ್ಚುವರಿ ತರಗತಿ ನಡೆಸಲು ಹಾಗೂ ಕಂಪ್ಯೂಟರ್​ ಶಿಕ್ಷಣವನ್ನು ಒದಗಿಸಲು ಉಚಿತ ವಿದ್ಯುತ್​ ಸೌಲಭ್ಯ ವ್ಯವಸ್ಥೆ ಅನುಕೂಲಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: ಆಪರೇಷನ್‌ ಬಿಪಿಎಲ್ ಸಕ್ಸಸ್… 4.09 ಲಕ್ಷ ಕುಟುಂಬಗಳಿಗೆ ಬಿಪಿಎಲ್ ರದ್ದು

ಇನ್ನು ಇದೇ ವೇಳೆ ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರವಾಗಿಯೂ ಮಾತನಾಡಿದ ಅವರು, ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್​ ಸ್ಕೂಲ್​ಗಳನ್ನು ಆರಂಭಿಸುತ್ತಿದ್ದೇವೆ. ಈ ಶಾಲೆಗಳಿಗಾಗಿ 18 ಸಾವಿರ ನೂತನ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ 50 ಸಾವಿರಕ್ಕೂ ಅಧಿಕ ಅತಿಥಿ ಶಿಕ್ಷಕರು ಪಬ್ಲಿಕ್​ ಸ್ಕೂಲ್​ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅವಿವಾಹಿತರಿಗೆ ಗುಡ್‌ನ್ಯೂಸ್ : ಸರಳ ಸಾಮೂಹಿಕ ವಿವಾಹ ಯೋಜನೆಯಡಿ ಸಿಗಲಿದೆ 50 ಸಾವಿರ ರೂಪಾಯಿ

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories