ಗೃಹಲಕ್ಷ್ಮೀ ಫಲಾನುಭವಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: Gruha Lakshmi: ರಾಜ್ಯದಲ್ಲಿನ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ದೊರಕಿದೆ. ಕರ್ನಾಟಕದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಸ್ಥಾಪನೆ ಮಾಡುತ್ತಿರುವ ಬಗ್ಗೆ ಈ ಹಿಂದೆಯೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಇದೀಗ ಸಹಕಾರ ಸಂಘದ ನೋಂದಣಿ ಕಾರ್ಯ ಪೂರ್ಣಗೊಂಡಿದೆ.

ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀ ಪತಯ್ಯ ಹಸ್ತಾಂತರಿಸಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಹಿಳೆಯರು ಭಾರೀ ಬಡ್ಡಿದರಕ್ಕೆ ರಾಷ್ಟ್ರೀಕೃತ ಬ್ಯಾಂಕ್​ಗಳು, ಖಾಸಗಿ ಫೈನಾನ್ಸ್​​ಗಳಲ್ಲಿ ಸಾಲ ಪಡೆದು ಬಡ್ಡಿ ಕಟ್ಟಲಾಗದೇ ಪರದಾಡುತ್ತಿದ್ದಾರೆ.

ಹೀಗಾಗಿ ನಾಡಿನ ಯಜಮಾನಿಯರನ್ನು ಈ ಸಂಕಷ್ಟದಿಂದ ಪಾರು ಮಾಡಲು ಗೃಹಲಕ್ಷ್ಮೀ ಬ್ಯಾಂಕ್​ ಸ್ಥಾಪಿಸಲಾಗಿದ್ದು ಮಹಿಳೆಯರಿಗೆ ಸಂಕಷ್ಟದಲ್ಲಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಕರ್ಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Also Read: ಜಾತಿಗಣತಿದಾರರಿಗೆ ಹಣ ನೀಡಲು ಚೌಕಾಶಿ : ಮಾತು ತಪ್ಪಿದ ಸರಕಾರ

ನವೆಂಬರ್​ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ದೊರಕಲಿದೆ.

ರಾಜ್ಯದಲ್ಲಿ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದೀಗ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದಡಿ ಇಟ್ಟಂತಾಗಿದೆ.

ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಕರ್ನಾಟಕದ ಪ್ರತೀ ಮನೆಯ ಗೃಹಿಣಿಯರು ಪ್ರತೀ ತಿಂಗಳು 2000 ರೂಪಾಯಿ ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದರು. ರಾಜ್ಯ ಸರಕಾರ ಇದುವರಗೆ ಹಣವನ್ನು ಬ್ಯಾಂಕುಗಳಿಗೆ ನೇರವರ್ಗಾವಣೆ ಮಾಡುತ್ತಿತ್ತು.

Also Read: ISKCON : ಇಸ್ಕಾನ್‌ ಟೆಂಪಲ್‌ ಮಾಲೀಕತ್ವ ಬೆಂಗಳೂರಿನ ಕೈತಪ್ಪುತ್ತಾ ? ಸುಪ್ರೀಂ ಕೋರ್ಟ್‌ ಭಿನ್ನ ತೀರ್ಪು

ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಕ ಹಂತದಲ್ಲಿ ಬೆಂಗಳೂರಿನಲ್ಲಿ ಆರಂಭಗೊಳ್ಳಲಿದ್ದು, ಹಂತ ಹಂತವಾಗಿ ಜಿಲ್ಲಾ ಕೇಂದ್ರಗಳಿಗೂ ವಿಸ್ತರಣೆ ಆಗಲಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗೃಹಲಕ್ಷ್ಮೀ ಸೊಸೈಟಿ ಆರಂಭವಾದ ನಂತರ ಗೃಹಲಕ್ಷ್ಮೀಯರಿಗೆ ಸೊಸೈಟಿ ಮೂಲಕವೇ ಪ್ರತೀ ತಿಂಗಳು ಹಣ ವರ್ಗಾವಣೆ ಆಗಲಿದೆ.

ಈ ಸೊಸೈಟಿ ಎಲ್ಲಾ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿ ಮಾಡಲಾಗುತ್ತಿದ್ದು, ಎಲ್ಲರಿಗೂ ಖಾತೆಯನ್ನು ತೆರೆಯಲಾಗುತ್ತದೆ. ಪ್ರತೀ ತಿಂಗಳ 2000 ಹಣ ಮಾತ್ರವಲ್ಲದೇ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರ ಮುಂದಾಗಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories