ನವೆಂಬರ್ ಕ್ರಾಂತಿ : ಹೈಕಮಾಂಡ್ ಮೇಲೆ ರಾಜ್ಯ ‘ಕೈ’ ನಾಯಕರ ಒತ್ತಡದ ತಂತ್ರ, ರಾಜಣ್ಣ ಯೂಟರ್ನ್
ಬೆಂಗಳೂರು: November Revolution: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಕೂಗಿನ ಬೆನ್ನಲ್ಲೇ ರಾಜ್ಯದ ಹಿರಿಯ ನಾಯಕರು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ನಿವಾಸಕ್ಕೆ ದೌಡಾಯಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ನವೆಂಬರ್ ಕ್ರಾಂತಿಯ ವಿಚಾರವಾಗಿಯೇ ಚರ್ಚೆ ನಡೆದಿರುವ ಸಾಧ್ಯತೆ ಇದೆ ಅನ್ನುವ ಮಾತುಗಳು ಕೇಳಿಬರುತ್ತಿದೆ.
ಬಿಹಾರ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ತಲೆಕೆಡಿಸಿಕೊಳ್ಳುವ ಯೋಚನೆಯಲ್ಲಿದೆ. ಈ ನಡುವಲ್ಲೇ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬಿಹಾರ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಖರ್ಗೆಯವರನ್ನು ಭೇಟಿ ಮಾಡಿದ್ದು ಹೈಕಮಾಂಡ್ ಮೇಲೆ ಒತ್ತಡದ ತಂತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ.
Also Read: ಗೃಹಲಕ್ಷ್ಮೀ ಫಲಾನುಭವಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಯೂಟರ್ನ್ ಹೊಡೆದ ಕೆಎನ್ ರಾಜಣ್ಣ :
ಇತ್ತ ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಹತ್ತಿಸಿದ್ದ ಮಾಜಿ ಸಚಿವ ಕೆ.ಎನ್ ರಾಜಣ್ಣ ಇದೀಗ ಯುಟರ್ನ್ ಹೊಡೆದಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜಕಾರಣ ನಿಂತ ನೀರಲ್ಲ. ಏನೂ ಬೇಕಾದರೂ ಆಗಬಹುದು. ಬೇರೆ ರಾಜ್ಯಗಳಲ್ಲಿ ರಾಜಕೀಯ ಬದಲಾವಣೆಗಳು ಆಗಬಹುದು. ಆದರೆ ನಮ್ಮ ರಾಜ್ಯದಲ್ಲಿ ಖಂಡಿತ ಯಾವುದೇ ಬದಲಾವಣೆ ಆಗದು ಎಂದಿದ್ದಾರೆ.
Also Read: ಜಾತಿಗಣತಿದಾರರಿಗೆ ಹಣ ನೀಡಲು ಚೌಕಾಶಿ : ಮಾತು ತಪ್ಪಿದ ಸರಕಾರ



