ಶಿಕ್ಷಣ ಕ್ರಾಂತಿ – ಪ್ರತೀ ಗ್ರಾಮಕ್ಕೊಂದು ಶಾಲೆ : 6000 ಕೆಪಿಎಸ್‌ ಶಾಲಾರಂಭ

ಬೆಂಗಳೂರು: Education Revolution: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿಯೂ ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡ ಕರ್ನಾಟಕ ಪಬ್ಲಿಕ್​ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ(Madhu Bangarappa) ಹೇಳಿದರು.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ಗಂಟೆ ಹೊಡೆದಾಕ್ಷಣ ದೇವರ ಪ್ರಸಾದ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ಶಾಲೆಯ ಗಂಟೆ ಹೊಡೆದಾಕ್ಷಣ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮ ಗುರಿ.

ಈ ನಿಟ್ಟಿನಲ್ಲಿ ಎಲ್​ಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ಒದಗಿಸುವ ಕೆಪಿಎಸ್​ ಸ್ಕೂಲ್​​ಗಳನ್ನು ಪ್ರತಿ ಗ್ರಾಮ ಗ್ರಾಮಗಳಲ್ಲಿಯೂ ಸ್ಥಾಪಿಸಲಿದ್ದೇವೆ ಎಂದು ಹೇಳಿದರು.

Also Read: ನವೆಂಬರ್‌ ಕ್ರಾಂತಿ : ಹೈಕಮಾಂಡ್​ ಮೇಲೆ ರಾಜ್ಯ ‘ಕೈ’ ನಾಯಕರ ಒತ್ತಡದ ತಂತ್ರ, ರಾಜಣ್ಣ ಯೂಟರ್ನ್‌

ರಾಜ್ಯದಲ್ಲಿ ಒಟ್ಟೂ 6 ಸಾವಿರ ಗ್ರಾಮ ಪಂಚಾಯಿತಿಯಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 1 ರಂತೆ 5 ಸಾವಿರ ಶಾಲೆಗಳನ್ನು ನಿರ್ಮಿಸುತ್ತೇವೆ. ಇಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಯಲ್ಲಿ ಊಟ, ಕಂಪ್ಯೂಟರ್ ಶಿಕ್ಷಣ, ಸಮವಸ್ತ್ರ, ಬಸ್​, ಕೌಶಲ್ಯ ತರಬೇತಿ ಹೀಗೆ ಎಲ್ಲವನ್ನೂ ಒದಗಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಸರಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಇದೀಗ ಹೊಸ ಸರಕಾರಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಸಲುವಾಗಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಕೆಪಿಎಸ್‌ ಶಾಲೆಗಳು ಆರಂಭಗೊಳ್ಳಲಿವೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories