ಯಲ್ಲಾಪುರ : ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ; ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್

ಯಲ್ಲಾಪುರ: ಸ್ಪಿರಿಟ್‌ (Arabail Ghat Spirit tanker) ತುಂಬಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಲಾರಿ ಹೊತ್ತಿ ಉರಿದು ಸಂಪೂರ್ಣ ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್‌ ಘಾಟ್‌ ನಲ್ಲಿ ನಡೆದಿದೆ.

ಚಿಕ್ಕೋಡಿಯಿಂದ ಕೇರಳದತ್ತ ಸ್ಪಿರಿಟ್ (ಎಥನಾಲ್) ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63ರಲ್ಲಿ, ಮಾರುತಿ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

Yellapur Terrible accident at Arabail Ghat Spirit tanker catches fire Kannada News

ಸ್ಪಿರಿಟ್ ಅತ್ಯಂತ ಸುಡುವ ವಸ್ತುವಾದ್ದರಿಂದ, ಲಾರಿ ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಟ್ಯಾಂಕರ್‌ಗೆ ತೀವ್ರ ಸ್ವರೂಪದ ಬೆಂಕಿ ಹೊತ್ತಿಕೊಂಡಿತು. ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಮುಟ್ಟುವಷ್ಟು ಭಾರಿ ಪ್ರಮಾಣದಲ್ಲಿದ್ದತ್ತು ಎಂದು ತಿಳಿದು ಬಂದಿದೆ.

ಘಟನೆಯ ತೀವ್ರತೆಯಿಂದಾಗಿ ಟ್ಯಾಂಕರ್ ಲಾರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಆದಾಗ್ಯೂ, ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನದಿಂದ ಹೊರಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ : ಭೂಮಿ ಯೋಜನೆ ಅರ್ಜಿ ವಿಲೇವಾರಿ, ಶಿರಸಿ ರಾಜ್ಯಕ್ಕೆ ಪ್ರಥಮ

ಅಪಘಾತದ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಭಾರಿ ಬೆಂಕಿಯನ್ನು ಹರಸಾಹಸಪಟ್ಟು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಆಸುಪಾಸಿನಲ್ಲಿ ಸಂಭವಿಸಬಹುದಾಗಿದ್ದ, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Yellapur Terrible accident at Arabail Ghat Spirit tanker catches fire Kannada News

ಈ ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ ಬಳಿಕ ಸಂಚಾರ ಪುನರಾರಂಭಗೊಂಡಿತು.

ಈ ಕುರಿತು ಯಲ್ಲಾಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಯಾವ ಕಾರಣದಿಂದಾಗಿ ಈ ಘಟನೆ ನಡೆದಿದೆ ಅನ್ನೋದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಇದನ್ನೂ ಓದಿ : ಕರ್ನಾಟಕದ 7000 ಸರಕಾರಿ ಶಾಲೆಗಳು ಬಂದ್‌

Yellapur Terrible accident at Arabail Ghat Spirit tanker catches fire Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories