- Advertisement -
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆಯಿದೆ.

ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಈ ಬಾರಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಜುಲೈ 30 ರಿಂದ ಅಗಸ್ಟ್ 1ರ ವರೆಗೆ ಸಿಇಟಿ ಪರೀಕ್ಷೆಗಳು ನಡೆದಿದ್ದು, ಮೌಲ್ಯಮಾಪನ ಕಾರ್ಯ ಈಗಾಗಲೇ ಮುಕ್ತಾಯಗೊಂಡಿದೆ.

ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ದತೆಗಳನ್ನು ಮಾಡಿಕೊಂಡಿದೆ. ಮುಂದಿನ ವಾರ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.