ಕೇಂದ್ರೀಯ ಮತ್ತು ನವೋದಯ ವಿದ್ಯಾಲಯಗಳಲ್ಲಿ 14 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
KVS NVS Recruitment 2025: ಮಕ್ಕಳಿಗೆ ಜ್ಞಾನವನ್ನು ಹಂಚುವಂತಹ ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಕನಸು ಕಾಣುತ್ತಿರುವವರಿಗೆ ಇದೀಗ ಸುವರ್ಣಾವಕಾಶ ಒದಗಿ ಬಂದಿದೆ.
ಅದೇನೆಂದರೆ ಕೆಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಸಿಬಿಎಸ್‌ಇ, ಕೆವಿಎಸ್ ಹಾಗೂ ಎನ್‌ವಿಎಸ್ ಈ ಎರಡೂ ಶಾಲೆಗಳಿಗಾಗಿ ಒಟ್ಟು 14,967 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 14 ರಿಂದ ಪ್ರಾರಂಭವಾಗಿರುವ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಡಿಸೆಂಬರ್ 4 ರ ವರೆಗೆ ಇರಲಿದೆ.
ಹುದ್ದೆಯ ವಿವರ
ನೇಮಕಾತಿ ಘೋಷಣೆಯ ಪ್ರಕಾರ ಒಟ್ಟು 14,967 ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕೇಂದ್ರೀಯ ವಿದ್ಯಾಲಯದಲ್ಲಿ 9126 ಹುದ್ದೆಗಳು ಹಾಗೂ ನವೋದಯ ವಿದ್ಯಾಲಯದಲ್ಲಿ 5841 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಹುದ್ದೆಗೆ ಅನುಗುಣವಾಗಿ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಟಿಜಿಟಿ, ಪಿಜಿಟಿ ಮತ್ತು ಪ್ರಾಂಶುಪಾಲರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್/ಎಂ.ಎಡ್ ಪದವಿಯನ್ನು ಹೊಂದಿರಬೇಕು.
ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಇತರ ನಿಗದಿತ ಅರ್ಹತೆಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವಯೋಮಿತಿ
ಕೆವಿಎಸ್ ಹಾಗೂ ಎನ್‌ವಿಎಸ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಹುದ್ದೆಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಯ ಕನಿಷ್ಠ ವಯಸ್ಸು 18, 30 ಮತ್ತು 35 ವರ್ಷಗಳು ಮತ್ತು ಗರಿಷ್ಠ ವಯಸ್ಸು 40, 45 ಮತ್ತು 50 ವರ್ಷಗಳು ಎಂದು ನಿಗದಿಪಡಿಸಲಾಗಿದೆ.
ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲ ಹುದ್ದೆಗಳಿಗೆ 2,800 ರೂ., ಸೀನಿಯರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಸ್ಟೆನೋಗ್ರಾಫರ್/ಜೆಎಸ್‌ಎ/ಲ್ಯಾಬ್ ಅಟೆಂಡೆಂಟ್/ಎಂಟಿಎಸ್ ಹುದ್ದೆಗಳಿಗೆ 1,700 ರೂ. ಮತ್ತು ಟಿಜಿಟಿ, ಪಿಜಿಟಿ, ಪಿಆರ್‌ಟಿ ಮತ್ತು ಇತರ ಹುದ್ದೆಗಳಿಗೆ 2,000 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ ವರ್ಗಗಳ ಅಭ್ಯರ್ಥಿಗಳು ಎಲ್ಲಾ ಹುದ್ದೆಗಳಿಗೆ 500 ರೂ. ಪಾವತಿಸಬೇಕಾಗಿದೆ.
ಇದನ್ನೂ ಓದಿ: ಶಿಮುಲ್‌ನಲ್ಲಿ ಭರ್ಜರಿ ನೇಮಕಾತಿ: 194 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?
- ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಮೊದಲು cbse.gov.in ವೆಬ್‌ಸೈಟ್‌ಗೆ ಹೋಗಿ.
- ಮುಖಪುಟದಲ್ಲಿರುವ ‘Latest’ ಗೆ ಹೋಗಿ. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಬಳಿಕ, ರಿಜಿಸ್ಟರ್ ಲಿಂಕ್ ಅನ್ನು ಕ್ಲಿಕ್ ಮಾಡಿ. ಅಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರು ನೋಂದಾಯಿಸಿಕೊಳ್ಳಿ.
- ನೋಂದಣಿ ಮಾಡಿಕೊಂಡ ನಂತರ, ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ಫಾರ್ಮ್ ಅನ್ನು ಪೂರ್ಣಗೊಳಿಸಿ.
- ಈಗ ಹುದ್ದೆಗೆ ಅನುಗುಣವಾಗಿ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.
- ಕೊನೆಯದಾಗಿ ಮತ್ತೊಮ್ಮೆ ಫಾರ್ಮ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಕೆಯ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.



