Modi road show: ಉಡುಪಿಯಲ್ಲಿ ಮೋದಿ ರೋಡ್ ಶೋ ರದ್ದು ..! ಬದಲಾವಣೆ ಆಯ್ತು ಕಾರ್ಯಕ್ರಮ
ಉಡುಪಿ : Modi road show: ಪ್ರಧಾನಿ ನರೇಂದ್ರ ಮೋದಿ(Narendra Modi) ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದಾರೆ. ಈ ವಿಚಾರವನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯ ಖಚಿತಪಡಿಸಿದೆ. ನವೆಂಬರ್ 28ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಬಳಿಕ ಲಕ್ಷ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಗೋವಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಮಯದ ಅಭಾವದಿಂದಾಗಿ ಈ ಹಿಂದೆ ನಿಯೋಜಿಸಲಾಗಿದ್ದ ರೋಡ್ ಶೋ ರದ್ದಾಗಿದೆ. ಪ್ರಧಾನಿ ಮೋದಿ ಆಗಮನ ಖಚಿತವಾಗುತ್ತಿದ್ದಂತೆಯೇ ಉಡುಪಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು ಹೆಲಿಪ್ಯಾಡ್, ಕಾಂಕ್ರೀಟ್ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ಚುರುಕುಗೊಂಡಿದೆ.
Also Read: ಉಡುಪಿ ಶ್ರೀಕೃಷ್ಣ ಮಠದ ಕನಕನ ಕಿಂಡಿಗೆ ಪ್ರಮೋದ್ ಮಧ್ವರಾಜ್‌ರಿಂದ ‘ಕನಕ ಕವಚ’ ಸಮರ್ಪಣೆ
ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11:05ಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ 11:10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ , ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.
ತದನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.



