ಅಯೋಧ್ಯೆ ಶ್ರೀರಾಮದೇಗುಲ ಸಂಪೂರ್ಣ : ಮೋದಿ ಕೇಸರಿ ಧ್ವಜ ಪ್ರತಿಷ್ಠಾಪನೆ

Ayodhya Ram Mandir : ನವದೆಹಲಿ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮ ಮಂದಿರದಲ್ಲಿ ಮೋದಿ ಕೇಸರಿ ಧ್ವಜ ಪ್ರತಿಷ್ಠಾಪನೆ ಮಾಡಲಿದ್ದಾರೆ.

ಶ್ರೀರಾಮನ ಜನ್ಮಭೂಮಿಯಾಗಿರುವ ಅಯೋಧ್ಯೆಯಲ್ಲಿ ರಾರಾಜಿಸುತ್ತಿರುವ ರಾಮ ಮಂದಿರದ ನಿರ್ಮಾಣ ಕಾಮಗಾರಿ ಸಂಪೂರ್ಣವಾಗಿದೆ. ಈ ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಶ್ರೀರಾಮ ಜನ್ಮಭೂಮಿ ಟ್ರಸ್ಟ್​ ಈ ಧಾರ್ಮಿಕ ಕಾರ್ಯಕ್ರಮಗಳ ಮೇಲುಸ್ತುವಾರಿ ವಹಿಸಿದೆ. ಮಧ್ಯಾಹ್ನದ ವೇಳೆ ದೇಗುಲದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇಗುಲ ನಿರ್ಮಾಣ ಪೂರ್ಣತೆಯನ್ನು ಸಾರಲಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಯೋಧ್ಯೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ ಮಾಡಲಾಗಿದೆ. ಕೇಸರಿ ಧ್ವಜ ಪ್ರತಿಷ್ಠಾಪನೆಗೆ ಇದೇ ದಿನವನ್ನು ಆಯ್ಕೆ ಮಾಡಿಕೊಳ್ಳುವುದರ ಹಿಂದೆ ಐತಿಹಾಸಿಕ ಕಾರಣವಿದೆ.

ಇದೇ ದಿನ 17ನೇ ಶತಮಾನದಲ್ಲಿ ಅಯೋಧ್ಯೆಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಿದ್ದರು ಎನ್ನಲಾದ ಗುರು ತೇಜ್ ಬಹದ್ದೂರ್ ಅವರ ಪುಣ್ಯಸ್ಮರಣೆಯೂ ಆಗಿದೆ. ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ ನವೆಂಬರ್​ 25ರ ಬೆಳಗ್ಗೆ 10 ಗಂಟೆಗೆ ಶ್ರೀರಾಮ ಜನ್ಮಭೂಮಿ ದೇವಾಲಯದಲ್ಲಿ ಪೂಜೆ ಮಾಡುವ ಅವಕಾಶ ನನಗೆ ಸಿಗುತ್ತಿರುವುದು ನನ್ನ ಸೌಭಾಗ್ಯ ಎಂದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶ್ರೀರಾಮಲಲ್ಲಾನ ಪವಿತ್ರ ದೇಗುಲದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಐತಿಹಾಸಿಕ ಕ್ಷಣಕ್ಕೆ ನಾನು ಸಾಕ್ಷಿಯಾಗಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Ayodhya Ram Mandir Completed PM Narendra Modi Hoists Saffron Flag

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories