Modi visit to Udupi: ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಸಂಚಾರ ನಿರ್ಬಂಧ, ಮಾರ್ಗ ಬದಲಾವಣೆ

Modi visit to Udupi: ಪ್ರಧಾನಿ ನರೇಂದ್ರ ಮೋದಿ ಇದೇ 28ನೇ ತಾರೀಖಿನಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಆ ದಿನದಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದೆ.

ಉಡುಪಿಯ ಎಲ್ಲೆಲ್ಲಿ ಸಂಚಾರ ನಿಷೇಧ..?ಎಲ್ಲೆಲ್ಲಿ ಮಾರ್ಗ ಬದಲಾವಣೆ ?

ಆದಿ ಉಡುಪಿ(Udupi) ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಬರುವಂತೆ ಸೂಚಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓವರ್- ಅಂಬಲಪಾಡಿ -ಬ್ರಹ್ಮಗಿರಿ- ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರಬೇಕಿದೆ.

Also Read: Modi road show: ಉಡುಪಿಯಲ್ಲಿ ಮೋದಿ ರೋಡ್ ಶೋ ರದ್ದು ..! ಬದಲಾವಣೆ ಆಯ್ತು ಕಾರ್ಯಕ್ರಮ

ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರಬೇಕು.ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗುಡ ಮುಖೇನಾ ಸಂಚರಿಸಬೇಕಿದೆ. ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರಬೇಕು ಎಂದು ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories