ಮಹಾಂತೇಶ್ ಬೀಳಗಿ ಇಂದು ಅಂತ್ಯಕ್ರಿಯೆ : ತಾಯಿ ಸಮಾಧಿ ಪಕ್ಕದಲ್ಲೇ ಅಂತಿಮ ವಿಧಿವಿಧಾನ

ಬೆಂಗಳೂರು : ಕರ್ನಾಟಕ ಕಂಡ ಅತ್ಯಂತ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Buragi) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯಕಂಡಿದ್ದಾರೆ.
ಮದುವೆ ಕಾರ್ಯಕ್ರಮಕ್ಕೆಂದು ತಮ್ಮ ಮೂವರು ಸಹೋದರರೊಂದಿಗೆ ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಾಮಾಣಿಕ ಅಧಿಕಾರಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಂಪೂರ್ಣ ಕರುನಾಡು ಕಂಬನಿ ಮಿಡಿದಿದೆ.
ಶ್ವಾನ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಂತೇಶ್ ಅವರನ್ನು ಕೂಡಲೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಂತೇಶ್ ಬೀಳಗಿ ಮೃತಪಟ್ಟಿದ್ದರು.
ಇದನ್ನೂ ಓದಿ : ಭೀಕರ ಅಪಘಾತ : ಉಡುಪಿಯಲ್ಲಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ದಕ್ಷ , ಪ್ರಾಮಾಣಿಕ ಅಧಿಕಾರಿಯ ನಿಧನ ಕರ್ನಾಟಕವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಮಹಂತೇಶ್ ಬೀಳಗಿ ಫೀಲ್ಡಿಗಿಳಿದು ನಿರ್ವಹಿಸಿದ ಕಾರ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು.
ಮಹಾಂತೇಶ್ ಬೀಳಗಿ ನಿಧನದ ಹಿನ್ನೆಲೆಯಲ್ಲಿ ಅವರ ತವರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನವಿಪೇಟೆಯಲ್ಲಿ ನೀರವ ಮೌನ ಆವರಸಿದೆ. ಬಾಲ್ಯದಲ್ಲಿ ಒಂದೊತ್ತು ಊಟಕ್ಕೂ ಪರದಾಡುವಂತಹ ಕುಟುಂಬದಲ್ಲಿ ಜನಿಸಿದ್ದ ಮಹಾಂತೇಶ್ಬೀಳಗಿ ಅವರನ್ನು ಅವರ ತಾಯಿ ರೊಟ್ಟಿ ಮಾರಿ ಸಾಕಿದ್ದರು.
ಇದನ್ನೂ ಓದಿ : ಉಡುಪಿ : ನವೆಂಬರ್ 28 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೊಷಣೆ
ದಕ್ಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಮಹಾಂತೇಶ್ ಅವರ ಅಂತ್ಯ ಸಂಸ್ಕಾರ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ. ರಾಮದುರ್ಗದ ತೋಟದಲ್ಲಿ ತಾಯಿಯ ಸಮಾಧಿ ಪಕ್ಕದಲ್ಲಿಯೇ ಮಹಾಂತೇಶ್ ಬೀಳಗಿ ಅವರ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
IAS Officer Mahantesh Buragi funeral today



