ಸಿಎಂ ಕುರ್ಚಿ ಕಸರತ್ತಿಗೆ ನಿರ್ಮಲಾನಂದನಾಥ ಸ್ವಾಮೀಜಿ ಪ್ರವೇಶ : ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ

Karnataka Politics CM fight : ಬೆಂಗಳೂರು : ಸಿಎಂ ಸ್ಥಾನ ತಮಗೆ ಬೇಕೆಬೇಕೆಂದು ಪಟ್ಟು ಹಿಡಿದು ಕುಳಿತಿರುವ ಡಿ.ಕೆ ಶಿವಕುಮಾರ್​ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್​ ಹೈಕಮಾಂಡ್​ಗೆ ರಾಜ್ಯ ರಾಜಕೀಯ ಬಿಸಿತುಪ್ಪವಾಗಿ ಪರಿಣಮಿಸಿದೆ. ಒಂದು ಕಡೆ ಡಿ.ಕೆ ಶಿವಕುಮಾರ್​ ಸಿದ್ದರಾಮಯ್ಯ ಬಣದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಇತ್ತ ಕುರ್ಚಿ ಕದನಕ್ಕೆ ಎಂಟ್ರಿ ನೀಡಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಡಿಕೆಶಿವಕುಮಾರ್​ ಸಿಎಂ ಆಗಬೇಕು ಎಂದಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಂದೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್​ ಅವರು ಸಿಎಂ ಆಗಬೇಕು ಎನ್ನುವುದು ನನ್ನ ಹಾಗೂ ಭಕ್ತರ ಅಭಿಲಾಷೆ ಎಂದು ಹೇಳಿದ್ದಾರೆ .

ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ರಾಜ್ಯ ರಾಜಕಾರಣಕ್ಕೆ ಒಕ್ಕಲಿಗ ಸಮುದಾಯ ಸಾಕಷ್ಟು ಕೊಡುಗೆ ನೀಡಿದೆ. ಕಳೆದ ಚುನಾವಣೆಯಲ್ಲಿ ಸಹ ನಮ್ಮ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಬೇಕೆಂದು ನಾವು ನಿರೀಕ್ಷೆ ಇಟ್ಟಿದ್ದೆವು. ಡಿ.ಕೆ ಶಿವಕುಮಾರ್​ ಎರಡೂವರೆ ವರ್ಷಗಳ ಕಾಲ ಸಿಎಂ ಆಗುತ್ತಾರೆ ಎಂದುಕೊಂಡಿದ್ದೆವು. ಆದರೆ ಅದು ಆಗುವ ಲಕ್ಷಣ ಕಾಣುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ಇದನ್ನೂ ಓದಿ : ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ : ಹೇಗಿರಲಿದೆ ಗೊತ್ತ ಭದ್ರತೆ ?

ಡಿ.ಕೆ ಶಿವಕುಮಾರ್​ ಪಕ್ಷಕ್ಕಾಗಿ ಶ್ರಮಪಟ್ಟು ಹೋರಾಡುವ ನಾಯಕರು. . ಅವರಲ್ಲಿ ಇರುವ ಸಾಮರ್ಥ್ಯ, ಸಂಘಟನಾ ಶಕ್ತಿ, ಪಕ್ಷ ನಿಷ್ಠೆ ಎಲ್ಲರಿಗೂ ಗೊತ್ತು. ಉಳಿದ ಅವಧಿಗೆ ಅವರಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಹಾಗೂ ಸಾವಿರಾರು ಭಕ್ತರ ಮನದ ಮಾತು ಎಂದು ಹೇಳಿದ್ದಾರೆ.

ಅಲ್ಲದೇ ಕಾಂಗ್ರೆಸ್​ ಹೈಕಮಾಂಡ್​ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿರುವ ನಿರ್ಮಲಾನಂದನಾಥ ಸ್ವಾಮೀಜಿ, ಡಿ.ಕೆ ಶಿವಕುಮಾರ್​ ಸಿಎಂ ಆಗದೇ ಹೋದಲ್ಲಿ ನಮ್ಮ ಭಕ್ತರಿಗೆ ಬೇಸರವಾಗಲಿದೆ.ಈಗಾಗಲೇ ಸಾಕಷ್ಟು ಭಕ್ತರು ಕರೆಮಾಡಿ ಕೇಳುತ್ತಿದ್ದಾರೆ.

ನಮ್ಮವರು ಸಿಎಂ ಆಗುತ್ತಾರೆಂದು ಒಕ್ಕಲಿಗರು ಕಾಂಗ್ರೆಸ್​ಗೆ ಬೆಂಬಲ ನೀಡಿದ್ದರು. ಆದರೆ ಇದು ಯಾಕೋ ಆಗುವ ಲಕ್ಷಣ ಕಾಣುತ್ತಿಲ್ಲ. ಆದರೆ ಇದು ರಾಜ್ಯ ಅಭಿವೃದ್ಧಿಗೆ ಕ್ಷೇಮವಲ್ಲ. ಕಾಂಗ್ರೆಸ್​ ಸ್ಪಷ್ಟತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಇದನ್ಣೂ ಓದಿ : ಪೋಕ್ಸೋ ಪ್ರಕರಣ : ಚಿತ್ರದುರ್ಗದ ಮುರುಘಾ ಶರಣರಿಗೆ ಬಿಗ್‌ ರಿಲೀಫ್‌

Karnataka Politics CM fight Enter Nirmalanandanatha Swamiji

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories