ಬಿಸಿಯೂಟ ಸೇವಿಸಿದ್ದ 22 ಮಕ್ಕಳು ಅಸ್ವಸ್ಥ : ಊಟದಲ್ಲಿತ್ತು ಇಲಿ ಹಿಕ್ಕೆ

Mundagod School incident : ಮುಂಡಗೋಡು : ಬಿಸಿಯೂಟ ಸೇವಿಸಿದ್ದ 22 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಊಟದಲ್ಲಿ ಇಲಿ ಹಿಕ್ಕಿ ಪತ್ತೆಯಾಗಿದ್ದು, ಇದರಿಂದಲೇ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸರಕಾರಿ ಶಾಲೆಯಲ್ಲಿ ಒಟ್ಟು 400 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಊಟ ಮಾಡಿದ ನಂತರದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಟ್ಟು 22 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಿಸಿಯೂಟದಲ್ಲಿತ್ತು ಇಲಿ ಹಿಕ್ಕೆ..!

ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಬಿಸಿಯೂಟದ ಗುಣಮಟ್ಟದ ಕೊರತೆಯೇ ಕಾರಣ ಅನ್ನೋ ಆರೋಪ ಕೇಳಿಬಂದಿದೆ. ಬಿಸಿಯೂಟದ ಬೇಳೆಯ ಕಾಳಿನಲ್ಲಿ ಇಲಿ ಹಿಕ್ಕಿಗಳು ಪತ್ತೆಯಾಗಿದೆ. ಇಲಿ ಹಿಕ್ಕೆ ಇದ್ದ ಬೇಳೆಯ ಕಾಳನ್ನು ಅಡುಗೆ ತಯಾರಕರು ಸರಿಯಾಗಿ ತೊಳೆದಿರಲಿಲ್ಲ.

ಇದರಿಂದಲೇ ಆಹಾರ ಸೇವನೆ ಮಾಡಿದ್ದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬೆಳಕಿಗೆ ಬರುತ್ತಲೇ ಸ್ಥಳೀಯರು ಹಾಗೂ ಪೋಷಕರು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಸಿಬ್ಬಂದಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಾಲೂಕು ವೈದ್ಯಾಧಿಕಾರಿಗಳು ಕೂಡ ಶಾಲೆಗೆ ಭೇಟಿ ನೀಡಿದ್ದಾರೆ.

ಶಾಲಾ ಸಿಬ್ಬಂದಿಗಳ ನಿರ್ಲಕ್ಷ್ಯ ಇರುವುದು ತನಿಖೆಯಲ್ಲಿ ಕಂಡು ಬಂದ್ರೆ ಅಂತಹ ಸಿಬ್ಬಂಧಿಗಳ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಪೋಷಕರಿಗೆ ಭರವಸೆ ಣಿಡಿದ್ದಾರೆ.

ಸರಕಾರ ಪೂರೈಕೆ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಹಾಗೂ ಬೇಳೆ ಕಾಳುಗಳು ಗುಣಮಟ್ಟದಿಂದ ಕೂಡಿಲ್ಲ ಅನ್ನೋ ಆರೋಪಗಳು ಕೇಳಿಬಂದ ಬೆನ್ನಲ್ಲೇ ಇದೀಗ ಮುಂಡಗೋಡದಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಮಕ್ಕಳ ಬಿಸಿಯೂಟಕ್ಕೆ ಕೋಟ್ಯಾಂತರ ರೂಪಾಯಿ ವ್ಯಯಿಸುವ ಸರಕಾರ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆ ಆಗ್ತಾ ಇದ್ಯಾ ? ಜೊತೆಗೆ ಶಾಲಾ ಸಿಬ್ಬಂದಿಗಳು ಸರಿಯಾಗಿ ಮಕ್ಕಳಿಗೆ ಆಹಾರ ನೀಡ್ತಿದ್ದಾರಾ ಅನ್ನೋ ಬಗ್ಗೆ ಗಮನ ಹರಿಸಬೇಕಾಗಿದೆ.

Mundagod School incident 22 students sick after school meals Uttar Kannada 

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories