ಪವರ್​ ಶೇರಿಂಗ್​ ಪಾಲಿಟಿಕ್ಸ್ : ಹೈಕಮಾಂಡ್​ ಆಣತಿಯಂತೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ಬ್ರೇಕ್​ಫಾಸ್ಟ್​ ಮೀಟಿಂಗ್

ಬೆಂಗಳೂರು : Power sharing politics: ರಾಜ್ಯದಲ್ಲಿ ಮುಖ್ಯಮಂತ್ರಿ ಗದ್ದುಗೆ ಗಲಾಟೆ ವಿಚಾರ ಬಗೆಹರಿಯುವ ಲಕ್ಷಣ ಕಾಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ(Siddharamaiah) ಹಾಗೂ ಡಿ.ಕೆ ಶಿವಕುಮಾರ್​ ಪರಸ್ಪರ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬಂದ ಬಳಿಕ ತಮ್ಮನ್ನು ಭೇಟಿ ಮಾಡುವಂತೆ ಹೈಕಮಾಂಡ್​ ತಾಕೀತು ಮಾಡಿತ್ತು.

ಅಂತೆಯೇ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್​ ಒಟ್ಟಾಗಿ ಕುಳಿತು ಉಪಹಾರ ಸೇವನೆ ಮಾಡುವ ಮೂಲಕ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ. ನೀವಿಬ್ಬರು ಒಟ್ಟಾಗಿ ಕುಳಿತು ಮಾತನಾಡಿ ನಿಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಿ ಎಂದು ಕಾಂಗ್ರೆಸ್​ ಹೈಕಮಾಂಡ್​ ಸೂಚನೆ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ಇನ್ನು ಈ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್​ ಪೊನ್ನಣ್ಣ ಕೂಡ ಹಾಜರಿದ್ದರು. ಈ ಸಭೆ ಮುಕ್ತಾಯಗೊಳ್ಳುತ್ತಿದ್ದಂತೆಯೇ ಡಿ.ಕೆ ಶಿವಕುಮಾರ್​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಸೇರಿದಂತೆ ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Also Read: World tallest Lord Ram Statue : ವಿಶ್ವದ ಅತೀ ಎತ್ತರದ ಶ್ರೀರಾಮ ವಿಗ್ರಹ : ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ನಡುವಿನ ಬ್ರೇಕ್​ಫಾಸ್ಟ್​ ಮೀಟಿಂಗ್​ನ ಫೋಟೋಗಳು ವೈರಲ್​ ಆಗಿದೆ. ಇಬ್ಬರೂ ನಾಯಕರು ಪರಸ್ಪರ ನಗುತ್ತಾ ಉಪಹಾರ ಸೇವಿಸಿದ್ದಾರೆ. ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ ಸೂತ್ರಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ.

ಈ ಸಭೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್​ ಅವರೊಂದಿಗೆ ಇಂದು ಉಪಹಾರ ಸಭೆ ನಡೆಸಿ ಹಲವು ಮಹತ್ವದ ಚರ್ಚೆಗಳನ್ನು ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.

Also Read: ಸಿಎಂ ಸಿದ್ದರಾಮಯ್ಯ ಕುರ್ಚಿಯಲ್ಲಿ ಕುಳಿತ ಡಿಸಿಎಂ ಡಿ.ಕೆ ಶಿವಕುಮಾರ್​

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories