Dog Survey Teachers : ಶಿಕ್ಷಕರಿಂದ ಬೀದಿ ನಾಯಿಗಳ ಶ್ವಾನ ಸಮೀಕ್ಷೆ : ಮಾಜಿ ಸಚಿವ ಸುರೇಶ್‌ ಕುಮಾರ್‌ ಆಕ್ರೋಶ

Dog Survey Teachers : ಬೆಂಗಳೂರು : ದೇಶದಾದ್ಯಂತ ಬೀದಿ ನಾಯಿಗಳ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಗಣಿಸಿದ ಸರ್ವೋಚ್ಛ ನ್ಯಾಯಾಲಯ, ಸಾರ್ವಜನಿಕ ಸ್ಥಳಗಳಾದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು, ಬಸ್​ ನಿಲ್ದಾಣಗಳು, ಕ್ರೀಡಾ ಸಂಕೀರ್ಣ ಮತ್ತು ರೈಲ್ವೇ ನಿಲ್ದಾಣಗಳಲ್ಲಿರುವ ಶ್ವಾನಗಳನ್ನು ಪುರ್ನವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ತೀರ್ಪು ನೀಡಿದೆ.

ಈ ರೀತಿ ಬೀದಿ ನಾಯಿಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ, ಪ್ರಾಣಿಗಳ ಹಕ್ಕು ಅಭಿಯಾನದ ಅಡಿಯಲ್ಲಿ ಸಹಿ ಸಂಗ್ರಹಣಾ ಅಭಿಯಾನ ಆರಂಭಿಸಲಾಗಿದೆ.

ಈ ಸಹಿ ಸಂಗ್ರಹಣಾ ಅಭಿಯಾನದಲ್ಲಿ ಸುಮಾರು 1.75 ಲಕ್ಷ ಜನರು ಭಾಗಿಯಾಗಿದ್ದು , ಈ ಸಹಿ ಪತ್ರಗಳನ್ನು ಸುಪ್ರೀಂ ಕೋರ್ಟ್‌ಗೆ ರವಾನೆ ಮಾಡಲಾಗಿದೆ .

ಇದನ್ನೂ ಓದಿ : ಉಡುಪಿ : ಯುವತಿ ಮೇಲೆ ಅತ್ಯಾಚಾರ ಯತ್ನ, ಹಿಂದೂ ಕಾರ್ಯಕರ್ತ ಅರೆಸ್ಟ್‌

ಶಿಕ್ಷಕರಿಗೆ ಶ್ವಾನ ಸಮೀಕ್ಷೆ ಜವಾಬ್ದಾರಿ : ಸುರೇಶ್‌ ಕುಮಾರ್‌ ಗರಂ

ಬೀದಿ ನಾಯಿಗಳ ಸಮೀಕ್ಷೆ ನಡೆಸಲು ಸರಕಾರ ಮುಂದಾಗಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಬೆನ್ನಲ್ಲೇ ಇದೀಗ ಶ್ವಾನ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನೂ ಕೂಡ ಶಿಕ್ಷಕರಿಗೆ ವಹಿಸಲಾಗಿದೆ.

ಶಿಕ್ಷಕರಿಗೆ ಶ್ವಾನ ಸಮೀಕ್ಷೆಯ ಜವಾಬ್ದಾರಿ ವಹಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾಜಿ ಸಚಿವ, ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರು ಮಕ್ಕಳಿಗೆ ಪಾಠ ಹೇಳಿಕೊಡಬೇಕೆ ಹೊರತು ಈ ರೀತಿ ಚಾಕರಿ ಮಾಡುವವರಲ್ಲ. ಇದರಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಈ ರೀತಿಯ ನಿರ್ಧಾರ ಕೈಗೊಂಡ ಮನಸ್ಥಿತಿಗೆ ನಮ್ಮ ಧಿಕ್ಕಾರ ಎಂದಿದ್ದಾರೆ.

Dog Survey in Karnataka Teachers: Ex-Minister Suresh Kumar Expresses Outrage

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories