Ditwa cyclone: ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತದ ಅಬ್ಬರ : ಕರ್ನಾಟಕದಲ್ಲೂ ಇರಲಿದೆ ಮೂರು ದಿನ ಮಳೆ

Ditwa cyclone: ಶ್ರೀಲಂಕಾವನ್ನು ನಡುಗಿಸಿದ್ದ ದಿತ್ವಾ ಚಂಡಮಾರುತದ ಎಫೆಕ್ಟ್​ ದಕ್ಷಿಣ ಭಾರತವನ್ನೂ ತಟ್ಟಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉತ್ತರ ತಮಿಳುನಾಡು – ಪುದುಚೇರಿ ಭಾಗದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಂಭವಿಸಿದೆ.

ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 50 ಕಿಲೋಮೀಟರ್ ಮತ್ತು ಪುದುಚೇರಿಯಿಂದ ಈಶಾನ್ಯಕ್ಕೆ 130 ಕಿಲೋಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ. ವಾಯುಭಾರ ಕುಸಿತವು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯ ಉತ್ತರದ ಕಡೆಗೆ ಚಲಿಸುತ್ತಿದ್ದು, ಮಧ್ಯಾಹ್ನದ ವೇಳೆಗೆ ಚೆನ್ನೈ(Chennai) ಕರಾವಳಿಯಿಂದ 30 ಕಿಲೋಮೀಟರ್ ದೂರದಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Also Read: Bombay Name Change : ಐಐಟಿ ಬಾಂಬೆ ಐಐಟಿ ಮುಂಬೈ ಆಗುತ್ತಾ? ಶುರುವಾಗಿದೆ ಹೆಸರು ಬದಲಾವಣೆಯ ಚರ್ಚೆ!

ಚೆನ್ನೈ ಮತ್ತು ತಿರುವಳ್ಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು ರೆಡ್​ ಅಲರ್ಟ್​ ಘೋಷಣೆಯಾಗಿದೆ. ಇದರ ಜೊತೆಯಲ್ಲಿ ರಾಣಿಪೇಟೆ, ಕಾಂಚಿಪುರಂ ಹಾಗೂ ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಇತ್ತ ಆಂಧ್ರಪ್ರದೇಶ ಹಲವು ಭಾಗಗಳಲ್ಲಿಯೂ ದಿತ್ವಾ ಚಂಡಮಾರುತದ ಎಫೆಕ್ಟ್​ ತಟ್ಟಿದೆ.ತಡರಾತ್ರಿ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ತಿರುಪತಿ ಜಿಲ್ಲೆಯಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

Also Read: Digital fraud: ಡಿಜಿಟಲ್​ ವಂಚಕರ ಜಾಲಕ್ಕೆ ಬ್ರೇಕ್​ ಹಾಕಲು ಕೇಂದ್ರ ಸರ್ಕಾರ ದಿಟ್ಟ ಕ್ರಮ : ಇನ್ಮುಂದೆ ನಡೆಯಲ್ಲ ಸೈಬರ್​ ಕಳ್ಳರ ಕಾಟ

ರಾಜ್ಯದಲ್ಲಿಯೂ ದಿತ್ವಾ ಚಂಡಮಾರುತದ ಎಫೆಕ್ಟ್​ ಇರಲಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ವೇಗವಾಗಿ ಗಾಳಿ ಬೀಸುವ ಅಪಾಯ ಇರುವುದರಿಂದ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories