ಡಿಆರ್‌ಡಿಒ ದಲ್ಲಿ 764 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ: ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ?

DRDO CEPTAM 11 Recruitment: ಭಾರತ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ (DRDO) ಸೆಂಟರ್‌ ಫಾರ್‌ ಪರ್ಸನಲ್‌ ಟ್ಯಾಲೆಂಟ್‌ ಮ್ಯಾನೆಜ್‌ಮೆಂಟ್‌ (CEPTAM – 11) ನೇಮಕಾತಿಗೆ ಕಿರು ಅಧಿಸೂಚನೆಯನ್ನು ಹೊರಡಿಸಿದೆ.

ಈ ಅಧಿಸೂಚನೆಯ ಪ್ರಕಾರ ಈ ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 764 ಸೀನಿಯರ್‌ ಟೆಕ್ನಿಕಲ್‌ ಅಸಿಸ್ಟೆಂಟ್‌ – ಬಿ ಹಾಗೂ ಟೆಕ್ನಿಷಿಯನ್‌ ಎ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಡಿಸೆಂಬರ್‌ 9 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಡಿಆರ್‌ಡಿಒ ದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ ಮತ್ತು ಮಾನದಂಡಗಳೇನು ಎಂದು ತಿಳಿಯೋಣ.

ಹುದ್ದೆಯ ವಿವರ

ಡಿಆರ್‌ಡಿಒ ಹೊರಡಿಸಿದ ಕಿರು ಅಧಿಸೂಚನೆಯ ಪ್ರಕಾರ, ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 764 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇವುಗಳಲ್ಲಿ 561 ಹುದ್ದೆಗಳು ಸೀನಿಯರ್‌ ಟೆಕ್ನಿಕಲ್‌ ಅಸಿಸ್ಟೆಂಟ್‌ – ಬಿ (STA B) ಮತ್ತು 203 ಟೆಕ್ನಿಷಿಯನ್‌ ಎ (ಟೆಕ್ ಎ) ಹುದ್ದೆಗಳಿಗೆ ಮೀಸಲಾಗಿವೆ.

ವಯೋಮಿತಿ

ಈ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಶೈಕ್ಷಣಿಕ ಅರ್ಹತೆ

ಶೈಕ್ಷಣಿಕ ಅರ್ಹತೆಗಳ ವಿವರಗಳನ್ನು ವಿವರವಾದ ಅಧಿಸೂಚನೆಯ ಬಿಡುಗಡೆಯೊಂದಿಗೆ ಅಭ್ಯರ್ಥಿಗಳು ತಿಳಿದುಕೊಳ್ಳಬಹುದು.

ಅರ್ಜಿ ಶುಲ್ಕ

ಡಿಆರ್‌ಡಿಒ ನೇಮಕಾತಿಯಲ್ಲಿ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಭರಿಸಿ ಅರ್ಜಿ ಸಲ್ಲಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ಭರ್ತಿ ಮಾಡಬಹುದು.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್‌ ನ್ಯೂಸ್: 25,487 SSC GD ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಈ ನೇಮಕಾತಿಗೆ ಆಯ್ಕೆಯಾಗಲು, ಅಭ್ಯರ್ಥಿಗಳು ಮೊದಲು ಟೈಯರ್-1 ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು. ಈ ಪರೀಕ್ಷೆಯಲ್ಲಿ ಅಗತ್ಯವಿರುವ ಕಟ್ಆಫ್ ಅಂಕಗಳನ್ನು ಗಳಿಸುವ ಅಭ್ಯರ್ಥಿಗಳು ನಂತರ ಟೈಯರ್-2 ಕೌಶಲ್ಯ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಈ ಎಲ್ಲಾ ಹಂತಗಳ ಫಲಿತಾಂಶಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories