ಧರ್ಮಸ್ಥಳ ಬುರುಡೆ ಪ್ರಕರಣ : ಮಾಸ್ಕ್​ ಮ್ಯಾನ್​ ಚಿನ್ನಯ್ಯ ಕುರಿತ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಹೇಶ್​ ಶೆಟ್ಟಿ ತಿಮರೋಡಿ

Dharmasthala case Mahesh Shetty Timarodi : ಪುತ್ತೂರು : ರಾಜ್ಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬುರುಡೆ ಪ್ರಕರಣದಲ್ಲಿ ಬುರುಡೆ ಗ್ಯಾಂಗ್​ನ ಅಸಲಿಯತ್ತು ಬಟಾಬಯಲಾಗಿದೆ. ಈ ನಡುವೆ ಇಂದು ಸೌಜನ್ಯಾ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಮಾಸ್ಕ್​ ಮ್ಯಾನ್​ ಚಿನ್ನಯ್ಯ ಹಾಗೂ ಪ್ರಭಾವಿ ಸ್ವಾಮೀಜಿ ನಡುವೆ ನಡೆದಿದ್ದ ರಹಸ್ಯ ಮೀಟಿಂಗ್​ ಒಂದರ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಪುತ್ತೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಸೌಜನ್ಯಾ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ, ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರುವುದು ಸತ್ಯ. ನಮ್ಮ ಜೊತೆಗೆ ಸೌಜನ್ಯ ಮನೆಯವರೂ ಆದಿಚುಂಚನಗಿರಿ ಮಠಕ್ಕೆ ಬಂದಿದ್ದರು.

ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆಗಳ ಕಾಲ ಸ್ವಾಮೀಜಿಗಳ ಮುಂದೆಯೇ ಎಲ್ಲವನ್ನೂ ಆತ ಬಿಡಿಸಿ ಹೇಳಿದ್ದ .ನಾನು ಬಿಡುಗಡೆ ಮಾಡಿದ ಒಂದೂವರೆ ಗಂಟೆಯ ವಿಡಿಯೋಕ್ಕಿಂತ ಜಾಸ್ತಿಯೇ ಅಲ್ಲಿ ಮಾತನಾಡಿದ್ದಾನೆ ಎಂದು ಹೇಳಿದರು.

ಯಾರ್ಯಾರು ಅತ್ಯಾಚಾರ ಮಾಡಿದ್ದಾರೆ, ಮಾಡಿಸಿದ್ದಾರೆ ಎಲ್ಲವನ್ನೂ ಆತ ಹೇಳಿಕೊಂಡಿದ್ದ. ಆದರೆ ಸ್ವಾಮೀಜಿಗಳು ಯಾಕೆ ಈ ವಿಚಾರವನ್ನು ಸಮಾಜದ ಮುಂದೆ ಹೇಳುತ್ತಿಲ್ಲ ಎಂಬುದು ತಿಳಿದಿಲ್ಲ. ಸ್ವಾಮೀಜಿ ಸ್ವತಃ ಈ ವಿಚಾರವನ್ನು ಮುಖ್ಯಮಂತ್ರಿಗಳಲ್ಲಿ ಮಾತನಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದರು.

ಮಹಾಕಾಲನ ಮೇಲೆ ಆಣೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿಯೇ ಸಿದ್ಧ ಎಂದಿದ್ದರು. ಕೊಟ್ಟ ಮಾತಿನಂತೆ ಸ್ವಾಮೀಜಿಗಳು ನ್ಯಾಯ ಕೊಡಿಸಲಿ. ಅದನ್ನು ಬಿಟ್ಟು ಮಠದಲ್ಲಿ ಕುಳಿತು ರಾಜಕೀಯ ಮಾಡುವುದಲ್ಲ ಎಂದು ಹೇಳಿದ್ದಾರೆ.

ನಾವು ಹಿಂದೂ ಧರ್ಮದ ವಿರೋಧಿಗಳಲ್ಲ. ಸನಾತನ ಧರ್ಮದ ಪ್ರತಿಪಾದಕರು. ಈ ವಿಚಾರವನ್ನು ಹಿಂದೆಯೂ ಹೇಳಿದ್ದೇನೆ,ಇಂದೂ ಹೇಳುತ್ತೇನೆ ಮುಂದೆಯೂ ಹೇಳುತ್ತೇನೆ.SIT ತನಿಖೆ ಆರಂಭವೇ ಆಗಿಲ್ಲ.ಅತ್ಯಾಚಾರಿಗಳ ವಿಚಾರಣೆ ಇನ್ನಷ್ಟೇ ಆಗಬೇಕಿದೆ.

ಇಲ್ಲಿ ತನಕ ಬರೇ ಒಂದು ಬುರುಡೆ ಹಿಡಿದುಕೊಂಡು ನಾಟಕ ಮಾಡುತ್ತಿದ್ದಾರೆ ಅಷ್ಟೇ.SIT ಒಳಗಡೆಯೇ ಷಡ್ಯಂತ್ರ ಮಾಡುವವರು ತುಂಬಿದ್ದಾರೆ.ಸ್ವತಃ ಎಸ್ಪಿ ಕೂಡ ಈ ನಾಟಕದಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಎಲ್ಲಾ ಸತ್ಯ ಹೊರಬೀಳಲಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಮಗೆ ಯಾರ ಮೇಲೂ ನಂಬಿಕೆ ಇಲ್ಲದಂತಾಗಿದೆ. ಮಾಧ್ಯಮ, ಕಾರ್ಯಾಂಗ ಯಾವುದರ ಮೇಲೂ ನಂಬಿಕೆ ಇಲ್ಲದಂತಾಗಿದೆ. ದೇಶದ ಕಾನೂನಿನ ಮೇಲೆ ಮಾತ್ರ ನಂಬಿಕೆ ಉಳಿದಿದೆ. ಮುಂದಿನ ದಿನಗಳಲ್ಲಿ ಕಾನೂನು ಮೂಲಕವೇ ನಾವು ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Dharmasthala case: Mahesh Shetty Timarodi reveals explosive information about Mask Man Chinnaiah .

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories