ಉಡುಪಿ : 10 ಮಂದಿ ಬಾಂಗ್ಲಾ ಅಕ್ರಮ ವಲಸಿಗರಿಗೆ 2 ವರ್ಷ ಶಿಕ್ಷೆ

Udupi Bangladeshi immigrants : ಉಡುಪಿ : ಉಡುಪಿಯಲ್ಲಿ ಪತ್ತೆಯಾಗಿದ್ದ ಬಾಂಗ್ಲಾದೇಶದ 10 ಮಂದಿ ಅಕ್ರಮ ವಲಸಿಗರಿಗೆ ಉಡುಪಿಯ ಪ್ರಥಮ ದರ್ಜೆ ಹಿರಿಯ ಸಿವಿಲ್‌ ನ್ಯಾಯಾಧೀಶರು ಗೂ ಸಿಜೆಎಂ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ ತಲಾ 10,000 ದಂಡ ವಿಧಿಸಿ ತೀರ್ಪು ನೀಡಿದೆ.

2024ರ ಅಕ್ಟೋಬರ್‌ 11 ರಂದು ಮಲ್ಪೆ ಪೊಲೀಸರು ರೌಂಡ್ಸ್ ನಲ್ಲಿ ಇರುವಾಗ ಸಂಜೆ 7 ಗಂಟೆ ಸುಮಾರಿಗೆ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿ ಅನುಮಾನಾಸ್ಪದವಾಗಿ ಲಗೇಜ್‌ ಸಮೇತ ತಿರುಗಾಡುತ್ತಿದ್ದರು.

ಕೂಡಲೇ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆಯಲ್ಲಿ ಅವರು ಅಕ್ರಮದಲ್ಲಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡು, ಸುಳ್ಳು ಮಾಹಿತಿಯನ್ನು ನೀಡಿ ವಂಚನೆ ಮಾಡಲು ಯತ್ನಿಸಿರುವುದು ಪತ್ತೆಯಾಗಿತ್ತು.

10 ಮಂದಿ ಕೂಡ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಕೀಮ್ ಆಲಿ, ಸುಜೋನ್ ಎಸ್.ಕೆ @ ಫಾರೂಕ್, ಇಸ್ಮಾಯಿಲ್ ಎಸ್.ಕೆ @ ಮಹಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ @ ಅಬ್ದುಲ್ ಕರೀಮ್, ಸಲಾಂ ಎಸ್.ಕೆ @ ಎಮ್‌ಡಿ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್ @ ಎಮ್‌ಡಿ ಅಲ್ಲಾಂ ಆಲಿ, ರಿಮೂಲ್ @ ಅಬ್ದುಲ್ ರೆಹಮಾನ್, ಮೊಹಮ್ಮದ್ ಇಮಾಮ್ ಶೇಖ್ ಮತ್ತು ಮೊಹಮ್ಮದ್ ಜಹಾಂಗಿರ್ ಆಲಂ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇದನ್ನೂ ಓದಿ : ಉಡುಪಿ : ಕುಡಿದ ಮತ್ತಲ್ಲಿ ಟ್ಯಾಂಕರ್‌ ಚಾಲನೆ, ತಪ್ಪಿತು ಬಾರೀ ದುರಂತ

ಪೊಲೀಸರು 10 ಮಂದಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಪ್ರತೀ ಆರೋಪಿಗೆ ತಲಾ 2 ವರ್ಷಗಳ ಜೈಲು ಶಿಕ್ಷೆ, ತಲಾ 10,000 ರೂಪಾಯಿ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಮಲ್ಪೆ ಪೊಲೀಸ್ ತಂಡದ ಕಾರ್ಯಾಚರಣೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Udupi 10 Bangladeshi illegal immigrants sentenced to 2 years in prison

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories